Tuesday, July 21, 2026
spot_imgspot_img
spot_imgspot_img

ಬೀದರ್‌: ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು!

- Advertisement -
- Advertisement -

ಬೀದರ್: ಮನೆಯ ಮುಂದೆ ಆಟ ಆಡುವ ಸಮಯದಲ್ಲಿ ಚರಂಡಿಗೆ ಬಿದ್ದು ಬಾಲಕ ಸಾವನ್ನಪ್ಪಿದ ಘಟನೆ ಬೀದರ್ ತಾಲೂಕಿನ ಮಲ್ಲಿಕ್‌ಮರ್ಜಾಪುರ ಗ್ರಾಮದಲ್ಲಿ ನಡೆದಿದೆ.

ಅವಿನಾಶ್ (5 ) ಮೃತ ಬಾಲಕ. ಆಟವಾಡುವ ವೇಳೆ ಮನೆಯ ಮುಂದಿನ ಚರಂಡಿ ಕಾಲುವೆಗೆ ಬಿದ್ದು ಬಾಲಕ ಮೃತಪಟ್ಟಿದ್ದಾನೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಶುಕ್ರವಾರ ಸಂಜೆ 6 ಗಂಟೆಯಿಂದ ಕಾಣೆಯಾಗಿದ್ದ ಬಾಲಕನಿಗಾಗಿ ಕುಟುಂಬಸ್ಥರು ಹುಡುಕಾಡುತ್ತಿದ್ದರು. ಆದರೆ ಬಾಲಕನ ಸುಳಿವು ಪತ್ತೆಯಾಗಿರಲಿಲ್ಲ. ಬಳಿಕ ಮನೆಯ ಮುಂದಿನ ಚರಂಡಿಗೆ ಬಿದ್ದು ಮಗು ಸಾವನ್ನಪ್ಪಿರುವುದು ಗೊತ್ತಾಗಿದೆ. ಬಗದಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!