Monday, July 20, 2026
spot_imgspot_img
spot_imgspot_img

ಬೀದರ್‍: ಕಾರು-ಬೈಕ್ ಢಿಕ್ಕಿ; ಮೂವರು ಸ್ಥಳದಲ್ಲೇ ಮೃತ್ಯು

- Advertisement -
- Advertisement -

ಬೀದ‌ರ್: ಕಾರು ಮತ್ತು ಬೈಕ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಮಹಾತ್ಮಾಗಾಂಧಿ ಸಕ್ಕರೆ ಕಾರ್ಖಾನೆ ಸಮೀಪ ಬುಧವಾರ ತಡರಾತ್ರಿ ನಡೆದಿದೆ.

ಮೃತರನ್ನು ಕಳಸದಾಳ್ ಗ್ರಾಮದ ವಿಠಲ್ ಪಾಂಚಾಳ್(25), ಮಹೇಶ್ ಬಿರಾದಾರ್(25) ಹಾಗೂ ಕಾಕನಾಳ್ ಗ್ರಾಮದ ರಾಜೇಂದ್ರ ಪಾಂಚಾಳ್(28) ಎಂದು ಗುರುತಿಸಲಾಗಿದೆ.

ವೇಗವಾಗಿ ಬಂದ ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಭಾಲ್ಕಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!