Tuesday, July 28, 2026
spot_imgspot_img
spot_imgspot_img

ಬೀದರ್: ಮೊಳಕೇರಾ ಗ್ರಾಮದಲ್ಲಿನಿಗೂಢ ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಸಚಿವ ಈಶ್ವರ್ ಖಂಡ್ರೆ

- Advertisement -
- Advertisement -

ಬೀದರ್ : ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದಲ್ಲಿ ನಡೆದ ನಿಗೂಢ ಸ್ಫೋಟದಲ್ಲಿ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಇಂದು ಬೆಳಿಗ್ಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼನಿನ್ನೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದಲ್ಲಿ ಸ್ಫೋಟವಾಗಿದ್ದು, ಬಹಳ ನೋವಿನ, ದುಃಖದ ಸಂಗತಿಯಾಗಿದೆ. ಘಟನೆಯಲ್ಲಿ ನಾಲ್ಕು ಮಕ್ಕಳಿಗೆ ಸುಟ್ಟಿದ ಗಾಯಗಳಾಗಿದೆ. ಇಬ್ಬರು ಹಿರಿಯರಿಗೆ ತೀವ್ರ ಗಾಯಗಳಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಒಬ್ಬರನ್ನು ಸೋಲಾಪುರ್ ಹಾಗೂ ಇನ್ನೊಬ್ಬರನ್ನು ಹೈದ್ರಾಬಾದ್ ಗೆ ಕಳುಹಿಸಲಾಗಿದೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲಾಡಳಿತ ನಿಗಾ ಇಟ್ಟಿದೆ. ಗಾಯಾಳುಗಳಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಬೇಕು ಎಂದು ವೈದ್ಯರಿಗೆ ಸೂಚಿಸಲಾಗಿದೆʼ ಎಂದರು

ಈ ಘಟನೆ ಯಾಕಾಗಿದೆ, ಏನಾಗಿದೆ, ಇದರ ಹಿನ್ನಲೆ ಏನು ಎನ್ನುವುದರ ಬಗ್ಗೆ ಪೂರ್ಣ ಪ್ರಮಾಣದಲ್ಲಿ ತನಿಖೆ ಮಾಡಲಾಗುತ್ತಿದೆ. ಸರಕಾರ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ನಾನು ನಿನ್ನೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಘಟನೆಯ ವಸ್ತುಸ್ಥಿತಿ ಬಗ್ಗೆ ಮನವರಿಕೆ ಮಾಡಿದ್ದೇನೆ. ಗಾಯಾಳುಗಳ ಚಿಕಿತ್ಸೆ ವೆಚ್ಚ ಸಂಪೂರ್ಣವಾಗಿ ಸರಕಾರ ಭರಿಸುತ್ತದೆ. ಹಾಗೆಯೇ ಈ ಘಟನೆ ಹಿಂದೆ ಯಾರೇ ಇದ್ದರೂ ಕೂಡ ಆಳವಾಗಿ ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಗ್ರಾಮಸ್ಥರು ಭಯ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು

- Advertisement -

Related news

error: Content is protected !!