Thursday, October 8, 2026
spot_imgspot_img
spot_imgspot_img

ಬೀದರ್: ಗ್ರಾ.ಪಂ ಸದಸ್ಯನಿಂದ ಸಿಬ್ಬಂದಿ ಮೇಲೆ ಹಲ್ಲೆ, ವಿಡಿಯೋ ವೈರಲ್

- Advertisement -
- Advertisement -

ಬೀದರ್: ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ತವರಲ್ಲೇ ಗ್ರಾ.ಪಂ ಡಾಟಾ ಎಂಟ್ರಿ ಆಪರೇಟರ್ ಮೇಲೆ ಗ್ರಾ.ಪಂ ಸದಸ್ಯ ಹಲ್ಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದಲ್ಲಿ ನಡೆದಿದೆ.

ಹಲ್ಲೆಯಾಗಿರುವ ವಿಡಿಯೋ ವೈರಲ್ ಆಗಿದ್ದು, ಆದರೆ ವಿಡಿಯೋ ಒಂದು ವರ್ಷದ ಹಿಂದೆಯೇ ಹಲ್ಲೆಯಾಗಿದ್ದು ಎಂದು ತೋರಿಸುತ್ತಿದೆ. ಸದ್ಯ ಗ್ರಾ.ಪಂ ಅಧಿಕಾರಿಗಳು, ಸಿಬ್ಬಂದಿ ಹಳೆಯ ವಿಡಿಯೋವನ್ನು ಇದೀಗ ವೈರಲ್ ಮಾಡಿ, ಹಲ್ಲೆ ಮಾಡಿದ ಸದಸ್ಯನ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

ಹಲ್ಲೆಯಿಂದ ಗ್ರಾ.ಪಂ ಅಧಿಕಾರಿಗಳು, ಸಿಬ್ಬಂದಿಯಲ್ಲಿ ಆತಂಕದ ಛಾಯೆ ಮನೆ ಮಾಡಿದ್ದು, ಈ ಕೂಡಲೇ ಹಲ್ಲೆ ಮಾಡಿದ ಸದಸ್ಯನ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಮಾಡಿದ್ದಾರೆ. ವೈಯಕ್ತಿಕ ವಿಚಾರಕ್ಕೆ ಡಾಟಾ ಎಂಟ್ರಿ ಆಪರೇಟರ್ ಮೇಲೆ ಸದಸ್ಯ ಹಲ್ಲೆ ಆರೋಪ ಕೇಳಿ ಬಂದಿದೆ.

ಈ ಕುರಿತು ಚಿಂತಾಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!