Wednesday, July 22, 2026
spot_imgspot_img
spot_imgspot_img

ಬೀದರ್‌: ಸಿಡಿಲು ಬಡಿದು ಯುವರೈತ ಸಾವು

- Advertisement -
- Advertisement -

ಬೀದರ್: ಕೃಷಿ ಚಟುವಟಿಕೆಗಾಗಿ ಜಮೀನಿಗೆ ಹೋಗಿದ್ದಾಗ ಸಿಡಿಲು ಬಡಿದು ರೈತ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬಾದಲಗಾಂವ ಗ್ರಾಮದಲ್ಲಿ ನಡೆದಿದೆ.

ರಾಹುಲ್ ಭಾಸ್ಕರ್(25) ಸಿಡಿಲಿಗೆ ಬಲಿಯಾದ ಯುವರೈತ. ಕೆಲಸದ ನಿಮಿತ್ತ ರಾಹುಲ್ ತಮ್ಮ ಜಮೀನಿಗೆ ತೆರಳಿದ್ದ ವೇಳೆ ಏಕಾಏಕಿ ಸಿಡಿಲು ಸಹಿತ ಮಳೆ ಆರಂಭವಾಗಿ ಜಮೀನಿನಲ್ಲಿದ್ದ ರಾಹುಲ್‌ಗೆ ಸಿಡಿಲು ಬಡಿದು ಈ ದುರಂತ ಸಂಭವಿಸಿದೆ.

ಕುಟುಂಬಕ್ಕೆ ಆಧಾರಸ್ತಂಭವಾಗಿದ್ದ ಯುವಕನ ಸಾವಿನಿಂದ ಪೋಷಕರು ಕಂಗಾಲಾಗಿದ್ದಾರೆ. ಘಟನಾ ಸ್ಥಳಕ್ಕೆ ಪೋಲಿಸರು ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!