Friday, March 29, 2024
spot_imgspot_img
spot_imgspot_img

BIG BREAKING NEWS ಹಿಜಾಬ್ ವಿವಾದ; ಮಹತ್ವದ ತೀರ್ಪು ಹೊರಡಿಸಿದ ಹೈಕೋರ್ಟ್‌..! ತರಗತಿಯಲ್ಲಿ ವಿದ್ಯಾರ್ಥಿಗಳು ಹೇಗಿರಬೇಕು..?

- Advertisement -G L Acharya panikkar
- Advertisement -
vtv vitla
vtv vitla

ಹೈಕೋರ್ಟ್‌ ಐತಿಹಾಸಿಕ ತೀರ್ಪಿನ ಪ್ರಮುಖಾಂಶಗಳು
ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗವಲ್ಲ
ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌
ವಿದ್ಯಾರ್ಥಿನಿಯರು ಸಮವಸ್ತ್ರ ಪಾಲನೆ ಕಡ್ಡಾಯ
ವಿದ್ಯಾರ್ಥಿನಿಯರ ಅರ್ಜಿ ವಜಾಗೊಳಿಸಿದ ನ್ಯಾಯಾಲಯ
ಹಿಜಾಬ್ ಧರಿಸಿ ಶಾಲಾ ಕಾಲೇಜಿಗೆ ಬರುವಂತಿಲ್ಲ
ಹೈಕೋರ್ಟ್‌ ತ್ರಿಸದಸ್ಯ ಪೀಠದಿಂದ ಮಹತ್ವದ ತೀರ್ಪು
ತೀರ್ಪು ಪ್ರಕಟಿಸಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಕರ್ನಾಟಕ ಜನತೆಯನ್ನು ಆತಂಕಕ್ಕೆ ಈಡುಮಾಡಿದ್ದ ಹಿಜಾಬ್ ಸಂಘರ್ಷದ ಹೈಕೋರ್ಟ್‌ ತೀರ್ಪು ಇಂದು ಪ್ರಕಟವಾಗಿದೆ. ಹೈಕೋರ್ಟ್ ತನ್ನ ತೀರ್ಪುನ್ನು ಪ್ರಕಟಿಸಿದೆ. ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಪೀಠ ಆಲಿಸಿದ್ದು ತನ್ನ ನಿರ್ಧಾರವನ್ನು ಪ್ರಕಟಿಸಿದೆ.

ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಶೇಷ ಪೀಠದಲ್ಲಿ ಮೂರು ವಾರಗಳ ಕಾಲ ವಿಚಾರಣೆ ನಡೆದಿತ್ತು. ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರು ಸಹ ಪೀಠದಲ್ಲಿರಲಿದ್ದಾರೆ.

ವಿವಾದ ಬೆಳೆದಿದ್ದು ಹೇಗೆ? ಸಂಕ್ಷಿಪ್ತ ವಿವರ
ಉಡುಪಿಯ ಸರ್ಕಾರಿ ಕಾಲೇಜಿನಲ್ಲಿ 6 ಮಂದಿ ಮುಸ್ಲಿಂ ವಿದ್ಯಾರ್ಥಿಗಳ ವಿಚಾರದಲ್ಲಿ ಶುರುವಾದ ಹಿಜಾಬ್ ಸಮಸ್ಯೆ ಬಳಿಕ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ವ್ಯಾಪಿಸಿತ್ತು. ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದರೆ ತಾವು ಕೇಸರಿ ಶಾಲು ಧರಿಸುವುದಾಗಿ ಇತ್ತ ಹಿಂದೂ ಸಮುದಾಯದ ಕೆಲ ಹುಡುಗರು ಪ್ರತಿಭಟನೆಗೆ ಇಳಿದರು. ಇದು ಶಾಲಾ- ಕಾಲೇಜು ವರ್ಗ ಹಾಗೂ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿತು.

ಉಡುಪಿ ಜಿಲ್ಲೆಯಲ್ಲಿ ಆರಂಭವಾದ ವಿವಾದ, ಶಿವಮೊಗ್ಗ, ಮೈಸೂರು, ಬೀದರ್, ಬಾಗಲಕೋಟೆ ಮುಂತಾದ ಜಿಲ್ಲೆಗಳಲ್ಲಿ ತಾರಕಕ್ಕೇರಿತು. ಕೊನೆಗೆ ರಾಜ್ಯ ಸರ್ಕಾರ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿತು. ಜನವರಿ 31 ರಂದು ಹಿಜಾಬ್ ವಿವಾದ ಸಂಬಂಧ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಯಿತು. ಬಳಿಕ, ಫೆಬ್ರವರಿ 3 ರಂದು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲಾಯಿತು. ಫೆಬ್ರವರಿ 9 ರಂದು ಪ್ರಕರಣ ಪೂರ್ಣ ಪೀಠಕ್ಕೆ ವರ್ಗಾವಣೆ ಮಾಡಲಾಯಿತು.

ವಿವಿಧ ಜಿಲ್ಲೆಗಳಲ್ಲಿ ಸೆಕ್ಷನ್ ಜಾರಿ
ಮೈಸೂರು, ಕೊಪ್ಪಳ, ಕೋಲಾರ, ರಾಯಚೂರು, ರಾಮನಗರ, ದಾವಣಗೆರೆ, ಚಿಕ್ಕಬಳ್ಳಾಪುರ, ಮಂಗಳೂರು, ಬಾಗಲಕೋಟೆ, ಬೆಳಗಾವಿ, ಮಡಿಕೇರಿ, ವಿಜಯಪುರ, ಯಾದಗಿರಿ, ಕಾರವಾರ, ಹುಬ್ಬಳ್ಳಿ, ಚಿತ್ರದುರ್ಗ, ತುಮಕೂರು, ಗದಗ, ಬೀದರ್, ರಾಮನಗರ ಸಹಿತ ಮುಂತಾದೆಡೆ ಸೆಕ್ಷನ್ ಜಾರಿ ಮಾಡಲಾಗಿದೆ. ಕೆಲವು ಜಿಲ್ಲೆಗಳಲ್ಲಿ 1, 2 ಹಾಗೂ ಕೆಲವೆಡೆ 6 ದಿನಗಳ ಕಾಲ ಸೆಕ್ಷನ್ ಜಾರಿಗೊಳಿಸಲಾಗಿದೆ. ಮಂಗಳೂರು, ಉಡುಪಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಹೈಕೋರ್ಟ್‌ ಐತಿಹಾಸಿಕ ತೀರ್ಪಿನ ಪ್ರಮುಖಾಂಶಗಳು
ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗವಲ್ಲ
ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌
ವಿದ್ಯಾರ್ಥಿನಿಯರು ಸಮವಸ್ತ್ರ ಪಾಲನೆ ಕಡ್ಡಾಯ
ವಿದ್ಯಾರ್ಥಿನಿಯರ ಅರ್ಜಿ ವಜಾಗೊಳಿಸಿದ ನ್ಯಾಯಾಲಯ
ಹೈಕೋರ್ಟ್‌ ತ್ರಿಸದಸ್ಯ ಪೀಠದಿಂದ ಮಹತ್ವದ ತೀರ್ಪು

- Advertisement -

Related news

error: Content is protected !!