Monday, June 22, 2026
spot_imgspot_img
spot_imgspot_img

ಮಂಗಳೂರು :ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಬಿಗ್ ರಿಲೀಫ್ ; ನಿರೀಕ್ಷಣಾ ಜಾಮೀನು ಮಂಜೂರು

- Advertisement -
- Advertisement -

ಮಂಗಳೂರು : ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಮಹಿಳೆಯರ ವಿರುದ್ಧ ರವಿವಾರ ಮಂಡ್ಯದಲ್ಲಿ ನೀಡಿರುವ ಅತ್ಯಂತ ಅವಹೇಳನಕಾರಿ ಹೇಳಿಕೆಗೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ ಅವರ ವಿರುದ್ಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಪ್ರಭಾಕರ್ ಭಟ್ ಕಲ್ಲಡ್ಕ ಬಿಗ್ ರಿಲೀಫ್ ದೊರೆತಿದೆ. ರಾಜ್ಯ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಮುಸ್ಲಿಂ ಮಹಿಳೆಯರನ್ನು ನಿಂದಿಸುವ ಹಾಗೂ ಸೌಹಾರ್ದತೆಗೆ ಭಂಗ ಉಂಟುಮಾಡುವ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ವಿರುದ್ಧ ಹಲವೆಡೆ ದೂರು ನೀಡಲಾಗಿದ್ದು ಬಂಧಿಸುವಂತೆ ಪ್ರತಿಭಟನೆ ನಡೆಸಿ ಆಗ್ರಹಿಸಲಾಗಿತ್ತು. ನಮ್ಮಾ ನಝೀರ್ ನೀಡಿದ ದೂರಿನ ಮೇರೆಗೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲಾಗಿತ್ತು. ಜಾಮೀನು ರಹಿತ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಡಾ.ಕಲ್ಲಡ್ಕ ಪ್ರಭಾಕರ ಭಟ್ ಜಾಮೀನಿಗಾಗಿ ಹೈಕೋರ್ಟ್ ಮೊರೆಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್ ಡಾ.ಭಟ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜಾಮೀನು ನೀಡುವಂತೆ ಹೈಕೋರ್ಟಿನಲ್ಲಿ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಿದ್ದರು.

- Advertisement -

Related news

error: Content is protected !!