ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 8 ಫೆಬ್ರವರಿಯಿಂದ ಆರಂಭವಾಗಲಿದೆ ಎನ್ನುವ ಸುದ್ದಿ ಹೊರ ಬಿದ್ದಿದ್ದೇ ತಡ, ಪ್ರೇಕ್ಷಕರು ಮನೆ ಒಳಗೆ ಯಾರು ಹೋಗಲಿದ್ದಾರೆ? ಈ ಬಾರಿ ಮನೆ ಸೇರುವ ಸ್ಪರ್ಧಿಗಳೆಷ್ಟು? ಸುದೀಪ್ ಯಾವ ಲುಕ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದ್ದರು. ಈ ಎಲ್ಲಾ ಪ್ರಶ್ನೆ ಹಾಗೂ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಸಂಜೆ 6 ಗಂಟೆಗೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ಬಿಗ್ ಬಾಸ್ ಸೀಸನ್ 8’ ಅದ್ಧೂರಿಯಾಗಿ ಪ್ರಾರಂಭಗೊಳ್ಳಲಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ನಟ ಸುದೀಪ್ ಬಿಗ್ ಬಾಸ್ ನಡೆಸಿಕೊಡಲಿದ್ದಾರೆ. ಪ್ರತಿ ಅಭ್ಯರ್ಥಿಯನ್ನು ವೇದಿಕೆಯ ಮೇಲೆ ಕರೆದು ಅವರ ಪರಿಚಯ ನೀಡಿ, ಮನೆ ಒಳಗೆ ಕಳುಹಿಸುವ ಕೆಲಸವನ್ನು ಸುದೀಪ್ ಮಾಡಲಿದ್ದಾರೆ.

ಸಂಜೆ 6 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಬಿಗ್ ಬಾಸ್ ಕಾರ್ಯಕ್ರಮ ನಡೆಯಲಿದೆ. ಕಂಟೆಸ್ಟೆಂಟ್ಗಳು ವೇದಿಕೆ ಏರುವುದರ ಜತೆಗೆ ಸಾಕಷ್ಟು ಮನರಂಜನಾ ಕಾರ್ಯಕ್ರಮಗಳು ಇರುವ ಸಾಧ್ಯತೆ ಇದೆ. ಈ ಬಾರಿಯು ಕಲರ್ಸ್ ಕನ್ನಡ ವಾಹಿನಿಯಲ್ಲಿ ಬಿಗ್ ಬಾಸ್ ಕಾರ್ಯಕ್ರಮ ಪ್ರಸಾರವಾಗಲಿದೆ.










