Tuesday, July 21, 2026
spot_imgspot_img
spot_imgspot_img

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರ ಸಚಿವ ನಿತಿನ್ ನಬಿನ್ ಆಯ್ಕೆ

- Advertisement -
- Advertisement -

ಹೊಸದಿಲ್ಲಿ: ಬಿಜೆಪಿಯ ಸಂಸದೀಯ ಮಂಡಳಿ ಬಿಹಾರದ ಸಚಿವ ನಿತಿನ್‌ ನಬಿನ್‌ ಅವರನ್ನು ಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ.

ಬಿಹಾರದ ಸಂಪುಟ ಸಚಿವ ಮತ್ತು ಐದು ಬಾರಿ ಶಾಸಕರಾಗಿರುವ 45 ವರ್ಷದ ನಿತಿನ್ ನಬಿನ್ ಬಿಜೆಪಿ ಕಾರ್ಯಾಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ರಾಜಕಾರಿಣಿಯಾಗಿದ್ದಾರೆ. ಒಂದು ವೇಳೆ ಅವರು ಅಧ್ಯಕ್ಷರಾಗಿ ಆಯ್ಕೆಯಾದರೆ, ಬಿಜೆಪಿಯ ಅತ್ಯಂತ ಕಿರಿಯ ಅಧ್ಯಕ್ಷ ಮತ್ತು ಬಿಹಾರದಿಂದ ಈ ಸ್ಥಾನಕ್ಕೇರಿದ ಮೊದಲ ನಾಯಕ ಎನಿಸಿಕೊಳ್ಳಲಿದ್ದಾರೆ.

ನಿತಿನ್ ನಬಿ ಆಯ್ಕೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಪಕ್ಷದ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ನಾಯಕ ನಿತಿನ್ ನಬಿಗೆ ಅಭಿನಂದನೆಗಳು. ಯುವ ನಾಯಕ ತನ್ನ ಕಠಿಣ ಪರಿಶ್ರಮದ ಮೂಲಕ ಪಕ್ಷದಲ್ಲಿ ಅಪಾರ ಅನುಭವ ಪಡೆದಿದ್ದಾರೆ. ಬಿಹಾರದಲ್ಲಿ ಶಾಸಕರಾಗಿ, ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಜನರ ಆಶೋತ್ತರಗಳು, ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಪ್ರತಿಯೊಬ್ಬರನ್ನು ಗೌರವದಿಂದ ಕಾಣುವ ನಿತಿನ್ ನಬಿ ಕಾರ್ಯಾಧ್ಯಕ್ಷತೆಯಲ್ಲಿ ಬಿಜೆಪಿ ಮತ್ತಷ್ಟು ಉತ್ತುಂಗಕ್ಕೆ ಏರಲಿದೆ. ನಿತಿನ್ ನಬಿನ್ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ.

- Advertisement -

Related news

error: Content is protected !!