- Advertisement -
- Advertisement -


ಮಂಗಳೂರು: ಬೈಕ್ ಅಪಘಾತಗೊಂಡು ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಪಡೀಲ್ ಅಂಡರ್‌ಪಾಸ್‌ನಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಬಜಾಲ್ ಸಮೀಪದ ಪಲ್ಲಕೆರೆಯ ನಿವಾಸಿ ಭವಿನ್ ರಾಜ್ (20) ಎಂದು ಗುರುತಿಸಲಾಗಿದೆ. ಗಾಲ್ವಿನ್ (19) ಮತ್ತು ಆಶಿತ್ 17) ಎಂಬವರು ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಕಲಿಯುತ್ತಿದ್ದ ಭವಿನ್ ರಾಜ್, ತನ್ನ ಗೆಳೆಯರ ಜತೆ ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ನಗರದ ಪಡೀಲ್ ಅಂಡರ್ ಪಾಸ್‌ನಲ್ಲಿ ಬೈಕ್ ಅಂಡರ್‌ಪಾಸ್ ಫುಟ್‌ಪಾತ್‌ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಇದರಿಂದ ಮೂವರು ಕೂಡ ಗಾಯಗೊಂಡಿದ್ದು, ಈ ಪೈಕಿ ಭವಿನ್ ರಾಜ್ ಮೃತಪಟ್ಟಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








