- Advertisement -




- Advertisement -
ನಿಯಂತ್ರಣ ತಪ್ಪಿ ಮರವೊಂದಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಳಂದೂರು ತಾಲೂಕಿನ ಗುಂಬಳ್ಳಿ ಬಳಿ ನಡೆದಿದೆ.
ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಕೃಷ್ಣಾಪುರದ ಮಹೇಶ್(24) ಮೃತ ದುರ್ದೈವಿ. ಈತ ಎಳನೀರು ಕೀಳುವ ಕೆಲಸ ಮಾಡುವ ಜೊತೆಗೆ ಸಾಮಾಜಿಕ ಜಾಲಾತಾಣದಲ್ಲಿ ರೀಲ್ಸ್ ಮಾಡುವ ಹವ್ಯಾಸ ಬೆಳೆಸಿಕೊಂಡಿದ್ದರು. ಡ್ಯಾನ್ಸ್, ಸ್ಟಂಟ್ ಗಳನ್ನು ರೀಲ್ಸ್ ಮಾಡಿ ಗಮನ ಸೆಳೆಯುತ್ತಿದ್ದರು. ಯಳಂದೂರು ಪೊಲೀಸರು ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
- Advertisement -