Friday, June 19, 2026
spot_imgspot_img
spot_imgspot_img

ಬೈಕುಗಳು ಮುಖಾಮುಖಿ ಢಿಕ್ಕಿ- ಬಸ್ಸಿನಡಿಗೆ ಬಿದ್ದ ಸವಾರ ಮೃತ್ಯು

- Advertisement -
- Advertisement -

ಮುಲ್ಕಿ: ಬೈಕುಗಳ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸವಾರನೋರ್ವ ರಸ್ತೆಗೆ ಎಸೆಯಲ್ಪಟ್ಟು ಅದೇ ದಾರಿಯಲ್ಲಿ ಬರುತ್ತಿದ್ದ ಬಸ್ಸಿನಡಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಹಳೆಯಂಗಡಿ ಸಮೀಪದ ಲೈಟ್ ಹೌಸ್ ಬಳಿ ನಡೆದಿದೆ.

ಮೃತ ಯುವಕನನ್ನು ಮೂಡುಬಿದ್ರೆ ನಿವಾಸಿ ಮೋಕ್ಷಿತ್ (19) ಎಂದು ಗುರುತಿಸಲಾಗಿದೆ. ಹಳೆಯಂಗಡಿಯಿಂದ ಕಿನ್ನಿಗೋಳಿ ಕಡೆಗೆ ತೆರಳುತ್ತಿದ್ದ ಬೈಕಿಗೆ ಲೈಟ್ ಹೌಸ್ ಬಳಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದು, ಈ ವೇಳೆ ಹಿಂದಿನಿಂದ ಬರುತ್ತಿದ್ದ ಬಸ್ ಬೈಕ್ ಸವಾರನ ಮೇಲೆ ಹರಿದು ಈ ದುರ್ಘಟನೆ ಸಂಭವಿಸಿದೆ. ಸುರತ್ಕಲ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!