Saturday, May 4, 2024
spot_imgspot_img
spot_imgspot_img

ಬೈಕ್ ಡಿಕ್ಕಿ; ತಂದೆ ಮಗ ಸ್ಥಳದಲ್ಲೇ ಸಾವು..!

- Advertisement -G L Acharya panikkar
- Advertisement -

ಯುಗಾದಿ ಹಬ್ಬದಂದೇ ತಂದೆ ಮಗ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೂನೇಗಲ್ ಗ್ರಾಮದ ಬಳಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ಮೂಲದವರಾಗಿದ್ದು ಮೃತಪಟ್ಟವರನ್ನು ತಂದೆ ಗಂಗಿರೆಡ್ಡಿ (41), ಮಗ ಆದರ್ಶ (21) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಸ್ವಗ್ರಾಮ ಹರಿಗಾರಗುಡ್ಡಕ್ಕೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮುಂದೆ ಹೋಗುತ್ತಿದ್ದ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!