- Advertisement -
- Advertisement -




ಮೈಸೂರು ಸಮೀಪದ ಮಳವಳ್ಳಿಯಲ್ಲಿ ಅಪಘಾತದಲ್ಲಿ ಕಲ್ಚಾರ್‌ನ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಯುವಕನನ್ನುಉಬರಡ್ಕ ಮಿತ್ತೂರು ಗ್ರಾಮದ ಕಲ್ಚಾರ್ ನಿವಾಸಿ ಶೇಷಪ್ಪ ನಾಯ್ಕರವರ ಪುತ್ರ ದೀಕ್ಷಿತ್ (25) ಎಂದು ಗುರುತಿಸಲಾಗಿದೆ.
ದೀಕ್ಷಿತ್‌ರವರು ಬೆಂಗಳೂರಿನಲ್ಲಿ ಖಾಸಗಿ ಉದ್ಯೋಗಿಯಾಗಿದ್ದು ಬೆಂಗಳೂರಿನಿಂದ ಹೊರಟು ಕಲ್ಚಾರ್‌ನ ತನ್ನ ಮನೆಗೆ ಬುಲೆಟ್ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಮೈಸೂರು ಸಮೀಪದ ಮಳವಳ್ಳಿಯಲ್ಲಿ ಅಪಘಾತ ಸಂಭವಿಸಿದೆ. ತೀವು ಅಪಘಾತದ ಪರಿಣಾಮ ಗಂಭೀರ ಗಾಯಗೊಂಡ ದೀಕ್ಷಿತ್‌ರವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಮನೆಯವರು ಮೈಸೂರಿಗೆ ತೆರಳಿರುವುದಾಗಿ ತಿಳಿದುಬಂದಿದೆ. ಬೈಕ್‌ಗೆ ಯಾವ ವಾಹನ ಗುದ್ದಿ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ತಿಳಿದುಬಂದಿಲ್ಲ.
- Advertisement -








