Friday, July 24, 2026
spot_imgspot_img
spot_imgspot_img

ಬೈಕ್ ಅಪಘಾತದ ವಿಮೆ ಕುರಿತು ಹೈಕೋರ್ಟ್ ನಿಂದ ಮಹತ್ವದ ಆದೇಶ

- Advertisement -
- Advertisement -

ಬೆಂಗಳೂರು: ಬೈಕ್ ನಲ್ಲಿ ಮೂವರು ಸವಾರಿ ಮಾಡುತ್ತಿರುವ ಸಂದರ್ಭದಲ್ಲಿ ಅಪಘಾತವಾಗಿ ಗಾಯವಾದರೆ ಅಥಾವ ಜೀವಹಾನಿಯಾದರೆ ಮೂರನೇ ಸವಾರನಿಗೂ ಸೂಕ್ತ ಪರಿಹಾರ ನೀಡಬೇಕು ಎಂಬ ಮಹತ್ವದ ಆದೇಶವನ್ನು ಹೈಕೋರ್ಟ್ ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ಅವರಿದ್ದ ಪೀಠ ನೀಡಿದೆ.

2011ರಲ್ಲಿ ಕಲಬುರ್ಗಿಯಲ್ಲಿ ನಡೆದಿದ್ದ ಅಪಘಾತ ಪ್ರಕರಣದಲ್ಲಿ ಮೂರನೇ ಸವಾರರಿಗೂ ವಿಮೆ ನೀಡಬೇಕು ಎಂದು ಮೋಟಾರು ವಾಹನ ನ್ಯಾಯಮಂಡಳಿ 2012ರಲ್ಲಿ ನೀಡಿದ್ದ ಆದೇಶವನ್ನು ವಿಮಾ ಕಂಪನಿ ಪ್ರಶ್ನಿಸಿತ್ತು. ಒಂದೇ ಬೈಕ್‌ನಲ್ಲಿ ಮೂವರು ಪ್ರಯಾಣಿಸುವ ಮೂಲಕ ವಿಮಾ ಷರತ್ತು ಉಲ್ಲಂಘಿಸಲಾಗಿದೆ. ಬೈಕ್ ಸವಾರ ಸರಿಯಾದ ಚಾಲನಾ ಪರವಾನಗಿಯನ್ನೂ ಹೊಂದಿಲ್ಲ ಎಂದು ವಿಮಾ ಕಂಪನಿ ಕಂಪನಿ ಆರೋಪಿಸಿತ್ತು.

ಬೈಕ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಮೂವರು ವ್ಯಕ್ತಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಹೇಳಲು ಆಗುವುದಿಲ್ಲ. ಬೈಕ್‌ ಅಪಘಾತ ಸಂದರ್ಭದಲ್ಲಿ ಅದರಲ್ಲಿ ಮೂವರು ಸವಾರಿ ಮಾಡುತ್ತಿದ್ದರೆ, ಮೂರನೇ ಸವಾರನಿಗೂ ಪರಿಹಾರ ನೀಡಬೇಕು ಎಂದು ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ಅವರಿದ್ದ ಪೀಠ, ವಿಮಾ ಕಂಪನಿಗೆ ಆದೇಶಿಸಿದೆ.

driving
- Advertisement -

Related news

error: Content is protected !!