Monday, June 15, 2026
spot_imgspot_img
spot_imgspot_img

ನೆಲ್ಯಾಡಿ : ಬೈಕ್‌ ಮತ್ತು ಪಿಕಪ್ ನಡುವೆ ಭೀಕರ ಅಪಘಾತ, ಬೈಕ್‌ ಸವಾರ ಮೃತ್ಯು

- Advertisement -
- Advertisement -

ನೆಲ್ಯಾಡಿ : ಬೈಕ್ ಹಾಗೂ ಪಿಕಪ್ ನಡುವೆ ಭೀಕರ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಜು. 12 ರಂದು ಮಧ್ಯಾಹ್ನ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಕೊಲ್ಪೆಯಲ್ಲಿ ನಡೆದಿದೆ.

ಮಂಗಳೂರು ಕೋಡಿಕ್ಕಲ್ ನಿವಾಸಿ, ಬೈಕ್ ಸವಾರ ಪ್ರಣಮ್ ಕೋಟ್ಯಾನ್ ಮೃತ ದುರ್ದೈವಿ.

ಇವರು ಮೆಡಿಕಲ್ ರೆಪ್ರಸೆಂಟಿವ್ ಆಗಿದ್ದು ಉಪ್ಪಿನಂಗಡಿಯಿಂದ ನೆಲ್ಯಾಡಿಗೆ ಹೋಗುತ್ತಿದ್ದ ವೇಳೆ ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಪಿಕಪ್ ನಡುವೆ ಕೊಲ್ಪೆಯಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಪ್ರಣಮ್ ಕೋಟ್ಯಾನ್ ಅವರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಲ್ಲಿ ಅವರು ಮೃತಪಟ್ಟರು ಎಂದು ವರದಿಯಾಗಿದೆ.
ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!