Sunday, June 21, 2026
spot_imgspot_img
spot_imgspot_img

ಪುತ್ತೂರು: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ; ಬೈಕ್ ಸವಾರರಿಬ್ಬರೂ ಸಾವು.

- Advertisement -
- Advertisement -

ಪುತ್ತೂರು:- ನರಿಮೊಗರು ಶಾಲಾ ಬಳಿ ಆ.30ರಂದು ರಾತ್ರಿ ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರೂ ದಾರುಣ ಸಾವಿಗೀಡಾದ್ದಾರೆ.ಕುರಿಯ ಗ್ರಾಮದ ಇಡಬೆಟ್ಟು ಸಮೀಪದ ಕಟ್ಟದಬೈಲು ಮಿಥುನ್(18) ಹಾಗೂ ಭವಿತ್ (19) ಮೃತಪಟ್ಟವರು.

ಬೈಕ್ ಮತ್ತು ಕಾರಿನ ಮಧ್ಯೆ ಅಪಘಾತವಾಗಿದೆ.ತಲೆಗೆ ತೀವ್ರ ಗಾಯಗೊಂಡಿದ್ದ ಸವಾರರೀರ್ವರೂ ಸಾವಿಗೀಡಾಗಿದ್ದಾರೆ.
ವೀರಮಂಗಲ ಸಮೀಪ ನಡೆದ ಮದುವೆ ಮೆಹಂದಿ ಕಾರ್ಯಕ್ರಮವೊಂದಕ್ಕೆ ಮಿಥುನ್, ಭವಿತ್ ಸಹೋದರರು ಬೈಕ್‌ನಲ್ಲಿ ಹೋಗಿ ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಮೃತ ಮಿಥುನ್ ಅವರು ನರಿಮೊಗ್ರು ಐಟಿಐ ವಿದ್ಯಾರ್ಥಿಯಾಗಿದ್ದರೆ, ಭವಿತ್ ಅವರು ಸೆಂಟ್ರಿಂಗ್, ಬಾವಿಗೆ ರಿಂಗ್ ಅಳವಡಿಸುವ ವೃತ್ತಿ ನಿರ್ವಹಿಸುತ್ತಿದ್ದರು.

- Advertisement -

Related news

error: Content is protected !!