Thursday, June 18, 2026
spot_imgspot_img
spot_imgspot_img

ಪುತ್ತೂರು: ಪಾದಚಾರಿಗೆ ಬೈಕ್ ಡಿಕ್ಕಿ -ಗಂಭೀರ ಗಾಯ

- Advertisement -
- Advertisement -

ಪುತ್ತೂರು :ಪತ್ನಿ ಜೊತೆ ಪೇಟೆಗೆಂದು ನಡೆದು ಕೊಂಡು ಬರುತ್ತಿದ್ದ ವೇಳೆ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆ ಕುಂಬ್ರ ಪೇಟೆಯಲ್ಲಿ ನಡೆದಿದೆ.

ಕೆದಂಬಾಡಿ ಗ್ರಾಮದ ಕುರಿಕ್ಕಾರ ನಿವಾಸಿ ಕೊರಗಪ್ಪ ಪೂಜಾರಿ ಎಂಬವರು ಗಾಯಗೊಂಡವರು.

ಅವರು ಪತ್ನಿ ರೇವತಿ ಜೊತೆ ಕುಂಬ್ರ ಪೇಟೆಗೆಂದು ರಸ್ತೆ ಬದಿಯಲ್ಲಿ ನಡೆದು ಕೊಂಡು ಬರುತ್ತಿದ್ದ ವೇಳೆ ಅವರ ಹಿಂದಿನಿಂದ ಬಂದ ಬೈಕ್ ಅವರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕೊರಗಪ್ಪ ಪೂಜಾರಿ ಅವರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!