- Advertisement -
- Advertisement -


ಕೋಲಾರ: ಓವರ್‌ಟೇಕ್ ಮಾಡಲು ಹೋಗಿ ಬೈಕ್ ಕಾರಿಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದು, ಹಿಂಬದಿ ಸವಾರನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಮೃತ ಬೈಕ್ ಸವಾರನನ್ನು ಕೋಲಾರದ ಗಾಂಧಿನಗರ ನಿವಾಸಿ ಚಂದ್ರಶೇಖರ್ (50) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಮತ್ತೊಬ್ಬ ಬೈಕ್ ಸವಾರ ಸುರೇಶ್‌ಗೆ ಕಾಲು ಮುರಿದಿದ್ದು, ಸಣ್ಣ ಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅತಿ ವೇಗವಾಗಿ ಓವರ್‌ಟೇಕ್ ಮಾಡಲು ಹೋಗಿ ಬೈಕ್ ಕಾರಿಗೆ ಡಿಕ್ಕಿಯಾಗಿದೆ. ಘಟನೆ ಬಳಿಕ ಕಾರನ್ನು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಕೋಲಾರ ಜಿಲ್ಲೆಯ ಕೆಜಿಎಫ್ (KGF) ತಾಲೂಕಿನ ಕೊತ್ತೂರು ಗ್ರಾಮದ ಬಳಿ ಈ ಘಟನೆ ನಡೆದಿದೆ. ಈ ಬಗ್ಗೆ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








