- Advertisement -
- Advertisement -
ರಸ್ತೆ ಪಕ್ಕದಲ್ಲಿ ದಿನಸಿ ಹೊತ್ತು ಹೊರಟಿದ್ದ ವೃದ್ಧನಿಗೆ ಬೈಕ್ ಡಿಕ್ಕಿ ಹೊಡೆದು ವೃದ್ಧನ ತಲೆಯಲ್ಲಿದ್ದ ದಿನಸಿ ಚೀಲಕ್ಕೆ ಕೈತಾಗಿ ಬಿದ್ದ ಮಹಿಳೆ ಮೇಲೆ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ.
ಧಾರವಾಡ ಮೂಲದ ವಿದ್ಯಾಶ್ರೀ (32) ಮೃತ ದುರ್ದೈವಿ. ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆ ಪಕ್ಕದಲ್ಲಿ ದಿನಸಿ ಹೊತ್ತು ಹೊರಟಿದ್ದ ವೃದ್ಧನಿಗೆ ಬೈಕ್ ಡಿಕ್ಕಿಯಾಗಿತ್ತು. ಈ ವೇಳೆ ವೃದ್ಧನ ಚೀಲಕ್ಕೆ ಬೈಕ್‌ನಲ್ಲಿ ಕುಳಿತಿದ್ದ ವಿದ್ಯಾಶ್ರೀ ಕೈತಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಕ್ರದಡಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೈಕ್ ಸವಾರ ಬಚಾವ್ ಆಗಿದ್ದಾರೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಬೈಕ್ ಸವಾರ ಬದುಕುಳಿದಿದ್ದಾರೆ.
ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.
- Advertisement -