Saturday, June 6, 2026
spot_imgspot_img
spot_imgspot_img

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ; ಸವಾರರಿಬ್ಬರು ಮೃತ್ಯು..!

- Advertisement -
- Advertisement -

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರರು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸುಂಟಿಕೊಪ್ಪ ಸಮೀಪದ ಬಿರ್ಚಿ ವುಡ್ ರೆಸಾರ್ಟ್‌ ಬಳಿ ನಡೆದಿದೆ.

ಮೃತರನ್ನು ಸುಂಟಿಕೊಪ್ಪದ ಮದುರಮ ಬಡಾವಣೆ ನಿವಾಸಿಗಳಾದ ಉದಯ(25) ಚಂದನ್(26) ಎಂದು ಗುರುತಿಸಲಾಗಿದೆ.

ತಡರಾತ್ರಿ ವೇಳೆ ಕುಶಾಲನಗರದಿಂದ ಸುಂಟಿಕೊಪ್ಪಕ್ಕೆ ಹೊಗುತ್ತಿರುವಾಗ ಈ ಅಪಘಾತ ನಡೆದಿದೆ. ನಿರ್ಜನ ಪ್ರದೇಶವಾದ್ದರಿಂದ ಬೆಳಗಿನವರೆಗೂ ಯಾರ ಗಮನಕ್ಕೂ ಬಂದಿರಲಿಲ್ಲ . ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.

- Advertisement -

Related news

error: Content is protected !!