Thursday, June 18, 2026
spot_imgspot_img
spot_imgspot_img

ಬೈಕ್- ಲಾರಿ ನಡುವೆ ಡಿಕ್ಕಿ; ಓರ್ವ ಮೃತ್ಯು..!

- Advertisement -
- Advertisement -

ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಮುರ್ತುಜಾ(46) ಎಂದು ಗುರುತಿಸಲಾಗಿದೆ

ಬೈಕ್ ಮೂಲಕ ರಸ್ತೆ ಕ್ರಾಸ್ ಮಾಡುವಾಗ ಈ ಅಪಫಾತ ನಡೆದಿದೆ. ಆಕ್ರೋಶಗೊಂಡ ಗ್ರಾಮಸ್ಥರು ತಡರಾತ್ರಿ ರಾಜ್ಯ ಹೆದ್ದಾರಿ ಬಂದ್ ಮಾಡಿದ್ದಾರೆ. ಒಂದು ಗಂಟೆಗಳ ಕಾಲ ರಸ್ತೆ ಬಂದ್ ಮಾಡಿದ ಗ್ರಾಮಸ್ಥರು ಪ್ರತಿಭಟಿಸಿದ್ದಾರೆ. ತಿಂಗಳಿಗೆ ಎರಡ್ಮೂರು ಅಪಘಾತವಾದ್ರೂ, ಅಧಿಕಾರಿಗಳು ನಿರ್ಲಕ್ಷ್ಯವಹಿಸುತ್ತಿದ್ದಾರೆ. ರಸ್ತೆಗೆ ಸ್ಪೀಡ್ ಬ್ರೇಕರ್ ಹಾಕೋವರೆಗೂ ಪ್ರತಿಭಟನೆ ಮಾಡುತ್ತೇವೆ ಎಂದ ಗ್ರಾಮಸ್ಥರು ಹೇಳಿದ್ದಾರೆ. ರಸ್ತೆಯಲ್ಲಿ ಬೆಂಕಿ ಹಚ್ಚಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೋಲೀಸರ ಆಗಮಿಸಿ ಗ್ರಾಮಸ್ಥರನ್ನು ಸಿಪಿಐ ಸಮಾಧಾನಪಡಿಸಿದ್ದಾರೆ. ಅದಕ್ಕೂ ಮುನ್ನ ಕೆಲಕಾಲ ಪೊಲೀಸ್ ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ.

- Advertisement -

Related news

error: Content is protected !!