- Advertisement -
- Advertisement -
ಬೈಕ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬನ್ನೇರುಘಟ್ಟ ರಸ್ತೆಯ ಡಿಮಾರ್ಟ್ ಬಳಿ ನಡೆದಿದೆ. 28 ವರ್ಷದ ಅರುಣ್ ಮೃತ ದುರ್ದೈವಿ.
ಕ್ಯಾಬ್ ಜೆಮಿನಿ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅರುಣ್, ಕಳೆದ ರಾತ್ರಿ 12 ಗಂಟೆ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಹೋಗುವಾಗ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಟಿಪ್ಪರ್ ಲಾರಿ ಅರುಣ್ ಬೈಕ್ಗೆ ಡಿಕ್ಕಿ ಹೊಡೆದಿದೆ. ರಾತ್ರಿ 12 ಗಂಟೆ ಸುಮಾರಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಅರುಣ್ ಕೆಳಗೆ ಬಿದ್ದಿದ್ದಾರೆ. ಕುಮಾರಸ್ವಾಮಿ ಲೇಔಟ್ ಸಂಚಾರಿ ಟ್ರಾಫಿಕ್ ಪೊಲೀಸರು ಲಾರಿ ಚಾಲಕನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
- Advertisement -