- Advertisement -
- Advertisement -



ಉಡುಪಿ : ಬೈಕ್ ಪಲ್ಟಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಸಮೀಪ ಸಂಭವಿಸಿದೆ.
ಕೋಟ ಮಣೂರು ಸುರೇಶ್ ಆಚಾರ್ಯ ಅವರ ಮಗ ವಿಕಾಸ್ ಆಚಾರ್ಯ (22) ಮೃತ ಯುವಕ
ಬೈಕ್ ಸವಾರ ರಾತ್ರಿ 1:30 ರ ಸುಮಾರಿಗೆ ಸಾಸ್ತಾನ ದಿಂದ ಕೋಟ ಮಣೂರು ಕಡೆ ಬರುತ್ತಿದ್ದ ವೇಳೆ ಕೋಟ ಗುಜಿರಿ ಅಂಗಡಿ ಸಮೀಪ ಬೈಕ್ ಸವಾರನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕುಂದಾಪುರ ಆಸ್ಪತ್ರೆಗೆ ರವಾನಿಸಲಾಗಿದೆ. ಕೋಟ ಪೊಲೀಸರು ಸ್ಥಳಕ್ಕಾಗಿಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -