- Advertisement -
- Advertisement -
ವಿಟ್ಲ: ನೇರಳಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ಕೆಳಗಡೆ ನಿಲ್ಲಿಸಲಾಗಿದ್ದ ಬೈಕನ್ನು ಕಳ್ಳರು ಕಳವುಗೈದಿರುವ ಘಟನೆ ನಡೆದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೆರಾಜೆ ಗ್ರಾಮದ ಮಂಜೊಟ್ಟಿ ನಿವಾಸಿ ಲೋಹಿತ್ ಅವರು ಸಂಬಂಧಿಯ ಬೈಕನ್ನು ಉಪಯೋಗಿಸಿಕೊಳ್ಳುತ್ತಿದ್ದರು.ಲೋಹಿತ್ ಅವರ ತಮ್ಮ ಸ್ವಸ್ತಿಕ್ ಅವರು ನೆಟ್ಲ ಮುಡ್ನೂರು ಗ್ರಾಮದ ನೇರಳಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ಪಾರ್ಕಿಂಗ್ ನಲ್ಲಿ ನಿಲ್ಲಿಸಿ ಕೆಲಸಕ್ಕೆ ಹೋಗಿದ್ದರು. ಸ್ವಸ್ತಕ್ ಅವರು ಕೆಲಸ ಮುಗಿಸಿಕೊಂಡು ಬಂದು ಬೈಕ್ ನಿಲ್ಲಿಸಿದ್ದ ಜಾಗದಲ್ಲಿ ನೋಡಿದಾಗ ಬೈಕ್ ಕಾಣೆಯಾಗಿತ್ತು. ಈ ಬಗ್ಗೆ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -