Sunday, June 14, 2026
spot_imgspot_img
spot_imgspot_img

ಬೆಳ್ತಂಗಡಿ: ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ

- Advertisement -
- Advertisement -

ಬೆಳ್ತಂಗಡಿ : ಈಚರ್ ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಆಸ್ಪತ್ರೆಗೆ ದಾಖಲಾದ ಘಟನೆ ಬೆಳ್ತಂಗಡಿ ತಾಲೂಕು, ಸೋಣಂದೂರು ಗ್ರಾಮದ ಪಣಕಜೆ ಬಸ್ ನಿಲ್ದಾಣದ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.

ಗಾಯಗೊಂಡ ಬೈಕ್ ಸವಾರನನ್ನು ಹರ್ಷರಾಜ್ ಎಂದು ಹೆಸರಿಸಲಾಗಿದೆ.

ಅಶೋಕ್ ಪೂಜಾರಿ ಎಂಬವರು ಚಲಾಯಿಸಿಕೊಂಡು ಬಂದ ಈಚರ್ ಟಿಪ್ಪರ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡ ಹರ್ಷರಾಜ್ ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಘಟನೆ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!