Friday, May 3, 2024
spot_imgspot_img
spot_imgspot_img

ಬಸ್ ಹರಿದು ಬೈಕ್ ಸವಾರ ಸಾವು..!

- Advertisement -G L Acharya panikkar
- Advertisement -

ಖಾಸಗಿ ಬಸ್ ಹರಿದು ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ನಾಗರಬಾವಿ ರಿಂಗ್ ರಸ್ತೆಯ ಮಲೆಮಹದೇಶ್ವರ ದೇವಸ್ಥಾನದ ಬಳಿ ನಡೆದಿದೆ.

ಮೃತಪಟ್ಟ ಬೈಕ್ ಸವಾರನ್ನು ಮುರಳಿ (40) ಎಂದು ಗುರುತಿಸಲಾಗಿದೆ.

ಮುರಳಿ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ವೇಗವಾಗಿ ಬಂದ ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಬೈಕ್ ಸವಾರ ಕೆಳಗೆ ಬಿದ್ದಿದ್ದು, ಬಸ್ ಮುರಳಿ ತಲೆಯ ಮೇಲೆ ಹರಿದಿದೆ. ಇದರಿಂದ ಮುರಳಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದ್ಯ ಬಸ್ ಚಾಲಕನನ್ನು ಜ್ಞಾನಭಾರತಿ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಘಟನೆಯಲ್ಲಿ ಸಾವನ್ನಪ್ಪಿದ ಮುರಳಿ ಮೃತದೇಹವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಜ್ಞಾನಭಾರತಿ ಸಂಚಾರಿ ಠಾಣೆಯಲ್ಲಿ ಪ್ರಕರಣ ನಡೆದಿದೆ.

- Advertisement -

Related news

error: Content is protected !!