Sunday, June 21, 2026
spot_imgspot_img
spot_imgspot_img

ಬೈಕ್‌ -ಸ್ಕೂಟರ್ ಅಪಘಾತ; ಯುವತಿ ಮೃತ್ಯು..!!

- Advertisement -
- Advertisement -

ಬೈಕ್‌ ಹಾಗೂ ಸ್ಕೂಟರ್ ನಡುವೆ ಅಪಘಾತ ನಡೆದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ.

ಮೃತ ಯುವತಿಯನ್ನು ಕುಶಾಲನಗರದ ಇಂದಿರಾ ಬಡಾವಣೆಯ ನಿವಾಸಿ ಪೂಣಚ್ಚ ಎಂಬುವರ ಪುತ್ರಿ ಭಾವನಾ (21) ಎಂದು ಗುರುತಿಸಲಾಗಿದೆ.

ಕುಶಾಲನಗರದ ಬೈಚನಹಳ್ಳಿ ಬಳಿ ಬೈಕ್‌ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್‌ ಸವಾರಿ ಮಾಡುತ್ತಿದ್ದ ಯುವತಿ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆ ಯುವತಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಈ ಕುರಿತು ಕುಶಾಲನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!