Friday, July 24, 2026
spot_imgspot_img
spot_imgspot_img

ಬೈಕ್ ಸ್ಕಿಡ್; ಸವಾರ ಸ್ಥಳದಲ್ಲೇ ಸಾವು..!

- Advertisement -
- Advertisement -

ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಕೊಟಗೇರಾ ಗ್ರಾಮದ ಸಮೀಪ ನಡೆದಿದೆ.

ಮೃತಪಟ್ಟ ಬೈಕ್ ಸವಾರ ಗುರುಮಠಕಲ್ ಪಟ್ಟಣದ ನಿವಾಸಿ ನರಸಪ್ಪ (48) ಎಂದು ಗುರುತಿಸಲಾಗಿದೆ.

ನರಸಪ್ಪ ಬೈಕ್‌ನಲ್ಲಿ ಯಾದಗಿರಿಯಿಂದ ಕೋಟಗೇರಾ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಬೈಕ್‌ ಸ್ಕಿಡ್‌ ಆಗಿ ನೆಲಕ್ಕೆ ಹಾರಿ ಬಿದ್ದಿದ್ದಾರೆ. ಇದರಿಂದ ಗಂಭೀರ ಗಾಯಗೊಂಡ ನರಸಪ್ಪ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರರೆ. ಸದ್ಯ ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.

- Advertisement -

Related news

error: Content is protected !!