- Advertisement -
- Advertisement -



ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಬೈರತಿ ಬಸವರಾಜ್ ಅವರು, ಹೈಕೋರ್ಟ್ ತಮ್ಮ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಬುಧವಾರ ಸಲ್ಲಿಸಲಾದ ಈ ಅರ್ಜಿಗೆ ಇನ್ನೂ ವಿಚಾರಣಾ ದಿನಾಂಕ ನಿಗದಿಯಾಗಿಲ್ಲವೆಂದು ತಿಳಿದುಬಂದಿದೆ.
ಜಾಮೀನು ನಿರಾಕರಣೆಯಾದ ಬಳಿಕ ಬಸವರಾಜ್ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಅವರು ಯಾರಿಗೂ ಸಂಪರ್ಕಕ್ಕೆ ಸಿಗದಿರುವ ಹಿನ್ನೆಲೆ ಸಿಐಡಿ ಅಧಿಕಾರಿಗಳು ವ್ಯಾಪಕ ಶೋಧ ಕಾರ್ಯ ಕೈಗೊಂಡಿದ್ದಾರೆ.
ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಲುಕ್‌ಔಟ್ ನೋಟಿಸ್ ಹೊರಡಿಸಿತ್ತು. ಬಳಿಕ ತಾತ್ಕಾಲಿಕ ಜಾಮೀನು ದೊರೆತ ಕಾರಣ ಅದು ಅಮಾನ್ಯಗೊಂಡಿತ್ತು. ಇದೀಗ ಮತ್ತೆ ಲುಕ್‌ಔಟ್ ನೋಟಿಸ್ ಹೊರಡಿಸುವ ಕುರಿತು ಕಾನೂನು ಸಲಹೆ ಪಡೆಯಲಾಗುತ್ತಿದ್ದು, ಮುಂಬೈ ಸೇರಿದಂತೆ ಹಲವು ಕಡೆಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ.
- Advertisement -








