


ಕೇರಳದ ಅಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕೇರಳದ ಗಡಿ ಭಾಗಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ.
ನಿನ್ನೆಯಿಂದ (ಸೋಮವಾರ) ತಲಪಾಡಿ, ಜಾಲ್ಸೂರು ಮತ್ತು ಸಾರಡ್ಕದಲ್ಲಿ ವಿಶೇಷ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗುವುದು. ಈ ಚೆಕ್ ಪೋಸ್ಟ್ಗಳಲ್ಲಿ ಕೋಳಿ ಉತ್ಪನ್ನಗಳನ್ನು ಕೇರಳಕ್ಕೆ ತಲುಪಿಸಿದ ನಂತರ ದಕ್ಷಿಣ ಕನ್ನಡಕ್ಕೆ ಹಿಂದಿರುಗುವ ವಾಹನಗಳನ್ನು ಸ್ಯಾನಿಸೈಟಸ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಮಂಗಳೂರಿನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ದೃಢಪಟ್ಟಿದ್ದು, ಆ ಜಿಲ್ಲೆಯಲ್ಲಿ ಇದು ಎರಡನೇ ಪ್ರಕರಣವಾಗಿದೆ. ಇದುವರೆಗೆ ದಕ್ಷಿಣ ಕನ್ನಡದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ನಾವು ಜಾಗರೂಕರಾಗಿರುತ್ತೇವೆ ಮತ್ತು ಮೂರು ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸುತ್ತೇವೆ ಎಂದು ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.
ಹಕ್ಕಿ ಜ್ವರ ವಿಶಿಷ್ಟವಾಗಿ ವಲಸೆ ಹಕ್ಕಿಗಳ ಮೇಲೆ ಪರಿಣಾಮ ಬೀರುತ್ತದೆ. ಆದರೆ ಪ್ರಸ್ತುತ ಬೇಸಿಗೆಯಲ್ಲಿ ಹಕ್ಕಿಗಳ ವಲಸೆ ಸಾಮಾನ್ಯವಾಗಿ ಕಡಿಮೆ ಇರುತ್ತದೆ. ವೈರಸ್ ಸೋಂಕಿತ ಕೋಳಿಗಳಿಂದ ಇತರ ಪಕ್ಷಿಗಳಿಗೆ ಮತ್ತು ಮನುಷ್ಯರಿಗೆ, ವಿಶೇಷವಾಗಿ ಕೋಳಿ ಸಾಕಣೆ ಕೇಂದ್ರಗಳು ಮತ್ತು ಮಾಂಸ ಸಂಸ್ಕರಣಾ ಘಟಕಗಳಲ್ಲಿ ಕೆಲಸ ಮಾಡುವವರಿಗೆ ಹರಡಬಹುದು. ಎಂದು ಅವರು ಮಾಹಿತಿ ನೀಡಿದ್ದಾರೆ.