Saturday, June 28, 2025
spot_imgspot_img
spot_imgspot_img

ಲಾಂಗ್‌ನಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ; ಆಟೋ ಚಾಲಕ ಅರೆಸ್ಟ್..!

- Advertisement -
- Advertisement -

ಚಿಕ್ಕಬಳ್ಳಾಪುರ: ಲಾಂಗ್ ಮೂಲಕ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ ಮಾಡಿದ ಆಟೋ ಚಾಲಕನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಗೌರಿಬಿದನೂರು ತಾಲೂಕಿನ ವೈಚಕೂರಹಳ್ಳಿ ನಿವಾಸಿ ಆಟೋ ಚಾಲಕ ಅನಿಲ್ ಕುಮಾರ್ ಎಂದು ಗುರುತಿಸಲಾಗಿದೆ.

ಅನಿಲ್ ಕುಮಾರ್ ತನ್ನ ಹುಟ್ಟು ಹಬ್ಬದಂದು ಕಿಂಗ್ ಎಂದು ಕೇಕ್ ಮಾಡಿಸಿ ಮಾರಕಾಸ್ತ ಲಾಂಗ್‌ನಲ್ಲಿ ಕಟ್ ಮಾಡಿ ಬರ್ತ್‌ಡೇ ಆಚರಿಸಿಕೊಂಡಿದ್ದ. ಬಳಿಕ ಆ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ.

ಈ ವೀಡಿಯೋ ನೋಡಿದ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಆಟೋ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!