- Advertisement -
- Advertisement -


ನವದೆಹಲಿ: ಭಾರತೀಯ ಜನತಾ ಪಕ್ಷ(ಬಿಜೆಪಿ)ತನ್ನ 45ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸುತ್ತಿದ್ದು, ಈ ನಡುವಲ್ಲೇ ಪಕ್ಷದ ಕಾರ್ಯಕರ್ತರನ್ನು ಕೊಂಡಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ತಿಳಿಸಿದ್ದಾರೆ.ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ಬಿಜೆಪಿ ಕಾರ್ಯಕರ್ತರನ್ನು ಕೊಂಡಾಡಿದ್ದಾರೆ. ನಿಮ್ಮ ಶಕ್ತಿ, ಉತ್ಸಾಹ ನಿಜಕ್ಕೂ ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.
ಎಲ್ಲಾ ಬಿಜೆಪಿ ಕಾರ್ಯಕರ್ತರಿಗೆ ಪಕ್ಷದ ಸಂಸ್ಥಾಪನಾ ದಿನದ ಶುಭಾಶಯಗಳು. ಕಳೆದ ಹಲವು ದಶಕಗಳಲ್ಲಿ ನಮ್ಮ ಪಕ್ಷವನ್ನು ಬಲಪಡಿಸಲು ತಮ್ಮನ್ನು ತಾವು ತೊಡಗಿಸಿಕೊಂಡ ಎಲ್ಲರನ್ನು ನಾವು ಸ್ಮರಿಸಿಕೊಳ್ಳುತ್ತೇವೆ. ಈ ಮಹತ್ವದ ದಿನವು ಭಾರತದ ಪ್ರಗತಿಯ ಕಡೆಗೆ ಕೆಲಸ ಮಾಡಲು ಮತ್ತು ವಿಕಸಿತ್ ಭಾರತದ ಕನಸನ್ನು ನನಸಾಗಿಸಲು ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಎಂದು ಹೇಳಿದ್ದಾರೆ.
- Advertisement -








