ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಕರ್ನಾಟಕ ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಶ್ರೀ ಪ್ರತಾಪಸಿಂಹ ನಾಯಕ್ ಅಭಿನಂದನೆ ಸಭೆ ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಇದರ ಹಾಲ್ ನಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು, ಮಾಜಿ ಶಾಸಕರಾದ ಶ್ರೀಮತಿ ಮಲ್ಲಿಕಾ ಪ್ರಸಾದ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ಭಾರತೀಯ ಜನತಾ ಪಾರ್ಟಿ ವಿಭಾಗ ಸಹ ಪ್ರಭಾರಿ ಶ್ರೀ ಗೋಪಾಲಕೃಷ್ಣ ಹೇರಳೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ರಾಧಾಕೃಷ್ಣ ರೈ ಬೂಡಿಯಾರ್, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ನಗರಮಂಡಲ ಅಧ್ಯಕ್ಷರಾದ ಶ್ರೀ ಜಗನ್ನೀವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪುರುಷೋತ್ತಮ ಮುಂಗ್ಲಿಮನೆ, ಶ್ರೀಮತಿ ಜಯಶ್ರೀ ಶೆಟ್ಟಿ, ಶ್ರೀ ನಿತೀಶ್ ಕುಮಾರ್ ಶಾಂತಿವನ, ಶ್ರೀ ಯುವರಾಜ್ ಪೆರಿಯತ್ತೋಡಿ,ಹರಿಪ್ರಸಾದ್ ಯಾದವ್ ಹಾಗೂ ಬಿಜೆಪಿ ಪ್ರಮುಖರು, ಪದಾಧಿಕಾರಿಗಳು ಮತ್ತು ಮತ್ತಿತರರು ಉಪಸ್ಥಿತರಿದ್ದರು.