Friday, May 17, 2024
spot_imgspot_img
spot_imgspot_img

ಮುಸ್ಲಿಂ ಯುವಕನೊಂದಿಗೆ ನಿಶ್ಚಯವಾಗಿದ್ದ ಮಗಳ ಮದುವೆಯನ್ನು ರದ್ದುಗೊಳಿಸಿದ ಬಿಜೆಪಿ ನಾಯಕ..!!

- Advertisement -G L Acharya panikkar
- Advertisement -

ನವದೆಹಲಿ: ಮುಸ್ಲಿಂ ವ್ಯಕ್ತಿಯೊಂದಿಗೆ ಬಿಜೆಪಿ ನಾಯಕನ ಮಗಳ ಮದುವೆ ವಿಚಾರ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವಿವಾದದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ, ಎರಡೂ ಕುಟುಂಬಗಳು ಪರಸ್ಪರ ಒಪ್ಪಿಗೆ ಮೇರೆಗೆ ಮದುವೆ ರದ್ದುಗೊಳಿಸಿಕೊಂಡಿವೆ.

ಮದುವೆಯ ಆಮಂತ್ರಣ ಪತ್ರಿಕೆಯ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾದ ನಂತರ ಬಿಜೆಪಿ ನಾಯಕ ಬೇನಾಮ್ ಅವರು ಶನಿವಾರ ಉತ್ತರಾಖಂಡದ ಪೌರಿ ಗಡ್ವಾಲ್‌ನಲ್ಲಿ ಮುಸ್ಲಿಂ ವ್ಯಕ್ತಿಯೊಂದಿಗೆ ತಮ್ಮ ಮಗಳ ಮದುವೆಯನ್ನು ವರನ ಕುಟುಂಬದೊಂದಿಗೆ ಪರಸ್ಪರ ಒಪ್ಪಿಗೆಯೊಂದಿಗೆ ರದ್ದುಗೊಳಿಸಿದ್ದಾರೆ.

ಬಿಜೆಪಿ ಮುಖಂಡರ ಮಗಳ ಮದುವೆ ಮೇ 28ರಂದು ನಡೆಯಬೇಕಿತ್ತು. ಮದುವೆಯನ್ನು ರದ್ದುಗೊಳಿಸಲಾಗಿದೆ ಎಂದು ಬಿಜೆಪಿ ನಾಯಕ ಶನಿವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಸಾರ್ವಜನಿಕ ಪ್ರತಿನಿಧಿಯಾಗಿರುವ ನನಗೆ ನನ್ನ ಮಗಳ ಮದುವೆ ಪೊಲೀಸ್ ಮತ್ತು ಆಡಳಿತದ ರಕ್ಷಣೆಯಲ್ಲಿ ನಡೆಯುವುದು ಇಷ್ಟವಿರಲಿಲ್ಲ. ನಾನು ಸಾರ್ವಜನಿಕ ಭಾವನೆಗಳನ್ನು ಗೌರವಿಸುತ್ತೇನೆ ಎಂದು ಬಿಜೆಪಿ ನಾಯಕ ಸ್ಪಷ್ಟಪಡಿಸಿದ್ದಾರೆ.

ನನ್ನ ಮಗಳು ಮುಸ್ಲಿಂ ಯುವಕನನ್ನು ಮದುವೆಯಾಗಲು ಇಷ್ಟ ಪಟ್ಟಿದ್ದಳು. ಮಕ್ಕಳ ಸಂತೋಷ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಎರಡೂ ಕುಟುಂಬಗಳು ಅವರಿಗೆ ಮದುವೆ ಮಾಡಲು ನಿರ್ಧರಿಸಿದ್ದೆವು. ಅದಕ್ಕಾಗಿ ಕಾರ್ಡ್‌ಗಳನ್ನು ಸಹ ಮುದ್ರಿಸಿ ಹಂಚಿಕೊಳ್ಳಲಾಗಿತ್ತು. ಆದರೆ ಮದುವೆಯ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಮದುವೆಗೆ ಹಲವು ರೀತಿಯ ಆಕ್ಷೇಪಗಳು ಬಂದಿವೆ. ಅದಕ್ಕಾಗಿ ಎರಡೂ ಕುಟುಂಬಗಳು ಪರಸ್ಪರ ಒಪ್ಪಿಗೆ ಮೇರೆಗೆ ಮದುವೆ ರದ್ದುಗೊಳಿಸಿದ್ದೇವೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

- Advertisement -

Related news

error: Content is protected !!