Thursday, May 16, 2024
spot_imgspot_img
spot_imgspot_img

ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ

- Advertisement -G L Acharya panikkar
- Advertisement -
This image has an empty alt attribute; its file name is VC_PUC_-1-819x1024.jpg
This image has an empty alt attribute; its file name is shri-energy-solar-667x1024.jpeg

ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ಶ್ರೀನಿವಾಸ ಪ್ರಸಾದ್ ಹೃದಯಾಘಾತದಿಂದ ಇಂದು ನಸುಕಿನ ಜಾವ 1.27ರ ಸುಮಾರಿಗೆ ನಿಧನರಾಗಿದ್ದಾರೆ.

ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತುಎಂಬ ಮಾಹಿತಿ ಲಭ್ಯವಾಗಿದೆ .

ವೈದ್ಯ ಡಾ. ಸುದರ್ಶನ್ ಬಲ್ಲಾಳ್, ಪ್ರಸಾದ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದರು. ಕೆಲವು ದಿನಗಳ ಹಿಂದೆ ಕಾಲು ನೋವು, ಮೂತ್ರಪಿಂಡ ಸೋಂಕು ಸೇರಿದಂತೆ ಇತರ ವಯೋಸಹಜ ಕಾಯಿಲೆಯಿಂದ ಏಪ್ರಿಲ್ 22ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಮೈಸೂರಿನ ಜಯಲಕ್ಷ್ಮೀಪುರ ನಿವಾಸಕ್ಕೆ ಪಾರ್ಥಿವ ಶರೀರ ರವಾನೆ ಮಾಡಲಾಗಿದ್ದು, ಇಂದು ಮೈಸೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಶ್ರೀನಿವಾಸ್ ಪ್ರಸಾದ್ ಪಾರ್ಥಿವ ಶರೀರವನ್ನು ಮಣಿಪಾಲ್ ಆಸ್ಪತ್ರೆಯಿಂದ ಮೈಸೂರಿಗೆ ಅಂಬ್ಯುಲೆನ್ಸ್ ಮೂಲಕ ರವಾನೆ ಮಾಡಲಾಗಿದೆ. ಮೈಸೂರಿನ ಜಯಲಕ್ಷ್ಮೀ ಪುರಂ ನಿವಾಸಕ್ಕೆ ಕುಟುಂಬಸ್ಥರು ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೊರಟ್ಟಿದ್ದಾರೆ. ಮೈಸೂರಿನ ವಸ್ತುಪ್ರದರ್ಶನ ಕೇಂದ್ರದಲ್ಲಿ ಸಾರ್ವಜನಿಕದ ದರ್ಶನಕ್ಕೆ ಇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಹಳೇ ಮೈಸೂರು ಭಾಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನ ಹೊಂದಿರುವ ಶ್ರೀನಿವಾಸ್ ಪ್ರಸಾದ್, ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಎಂದೇ ಖ್ಯಾತರಾಗಿದ್ದರು. ಚಾಮರಾಜನಗರ ಸಂಸದರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರಸಾದ್, ರಾಜಕೀಯ ಪ್ರವೇಶಿಸಿ 50 ವರ್ಷ ತುಂಬಿದ ಹಿನ್ನಲೆಯಲ್ಲಿ ಕಳೆದ ಮಾರ್ಚ್ 17 ರಂದು ಸುವರ್ಣ ಮಹೋತ್ಸವ ಆಚರಿಸಿ ಚುನಾವಣಾ ರಾಜಕೀಯ ಹಾಗೂ ಸಕ್ರಿಯ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು.

- Advertisement -

Related news

error: Content is protected !!