Saturday, June 6, 2026
spot_imgspot_img
spot_imgspot_img

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ -ಸ್ಪಷ್ಟನೆ ನೀಡಿದ ನಳೀನ್ ಕುಮಾರ್ ಕಟೀಲ್

- Advertisement -
- Advertisement -

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದ ನಳೀನ್​ ಕುಮಾರ್​ ಕಟೀಲ್​ ಇದೀಗ ಏಕಾ ಏಕಿ ಉಲ್ಟಾ ಹೊಡೆದಿದ್ದಾರೆ, ನಾನು ಚುನಾವಣೆಯ ಸೋಲಿಗೆ ನೈತಿಕ ಹೊಣೆ ಹೊತ್ತಿರೋದು ನಿಜ, ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಸೋಲಿನ ಕಾರಣಗಳ ಬಗ್ಗೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. ಕಳೆದ ನಾಲ್ಕು ವರ್ಷಗಳಿಂದ ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಲ್ಲಿದ್ದೇನೆ . ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಪಕ್ಷದ ಹಿರಿಯರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ.

- Advertisement -

Related news

error: Content is protected !!