Thursday, June 18, 2026
spot_imgspot_img
spot_imgspot_img

ಬಿಜೆಪಿ ಟಿಕೇಟ್ ಡೀಲ್ ಪ್ರಕರಣ – ಗುರುಪುರ ವಜ್ರಾದೇಹಿ ಮಠ ಸ್ವಾಮೀಜಿಗೆ ಸಿಸಿಬಿ ನೋಟೀಸ್

- Advertisement -
- Advertisement -

ಬಿಜೆಪಿ ಟಿಕೆಟ್ ಡೀಲ್ ವಿಷಯವಾಗಿ ಹಿಂದೂ ಮುಖಂಡೆ ಚೈತ್ರ ಹಾಗೂ ಹಾಲಶ್ರೀ ಸ್ವಾಮೀಜಿ ಬಂಧನವಾಗಿ ತಿಂಗಳು ಕಳೆದ ನಂತರ ದಕ್ಷಿಣ ಕನ್ನಡದ ಪ್ರಮುಖ ಹಿಂದೂ ಪರ ಇರುವಸ್ವಾಮೀಜಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿಯಾಗಿದೆ.

ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬೈಂದೂರಿನ ಬಿಜೆಪಿ ಟಿಕೇಟ್ ನೀಡುವ ವಿಚಾರವಾಗಿ ಡೀಲ್ ನಡೆದು ಚೈತ್ರ ಬಂಧನ ಆದ ನಂತರ ಚೈತ್ರ ಇ.ಡಿ ಗೆ ಬರೆದ ಪತ್ರದಲ್ಲಿ ವಜ್ರಾದೇಹಿ ಶ್ರೀ , ಚಕ್ರವರ್ತಿ ಸೂಲಿಬೆಲೆ, ಹಾಗೂ ಸಿಟಿ ರವಿ ಹೆಸರು ಉಲ್ಲೇಖವಾಗಿತ್ತು.

ಇದೀಗ ಸಿಸಿಬಿ ಮಂಗಳೂರು ಗುರುಪುರ ವಜ್ರಾದೇಹಿ ಮಠದ ರಾಜಶೇಖರಾನಂದ ಸ್ವಾಮಿಜೀಗೆ ನೋಟಿಸ್‌ ಜಾರಿ ಮಾಡಿದೆ.
ಬೆಂಗಳೂರು ನಗರ ಸಿಸಿಬಿ ಮಹಿಳಾ ಸಂರಕ್ಷಣಾ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಬೆಂಗಳೂರು ಸಿಸಿಬಿ ಸಹಾಯಕ ಪೊಲೀಸ್ ಕಮಿಷನರ್ ವಜ್ರಾದೇಹಿ ಶ್ರಿಗಳಿಗೆ ನೋಟಿಸ್‌ ಜಾರಿ ಮಾಡಿದ್ದಾರೆ.

- Advertisement -

Related news

error: Content is protected !!