Sunday, April 28, 2024
spot_imgspot_img
spot_imgspot_img

ಬಿಜೆಪಿ ಕಾರ್ಯಕರ್ತರ ಪರಿಶ್ರಮ ಅಭ್ಯರ್ಥಿಗಳ ಗೆಲುವಿಗೆ ಪೂರಕ: ನಳಿನ್‌ ಕುಮಾರ್ ಕಟೀಲ್

- Advertisement -G L Acharya panikkar
- Advertisement -

ಮಂಗಳೂರು: ರಾಜ್ಯದಲ್ಲಿ ಮತದಾರರು ಬಿಜೆಪಿ ಪರವಾಗಿರುವುದು ಗ್ರಾಪಂ ಚುನಾವಣೆಯ ಫಲಿತಾಂಶದಲ್ಲಿ ಸ್ಪಷ್ಟವಾಗಿದೆ. ನಿರೀಕ್ಷೆಯಂತೆ ಬಿಜೆಪಿ ಬೆಂಬಲಿಗರು ಅತ್ಯಧಿಕ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದು, ರಾಜ್ಯದ ಬಹುತೇಕ ಗ್ರಾಪಂಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ದ.ಕ. ಸಂಸದ ನಳಿನ್‌ಕುಮಾರ್‌ ಕಟೀಲ್‌ ತಿಳಿಸಿದ್ದಾರೆ.

ಕೇಂದ್ರದ ಮೋದಿ ಸರಕಾರ ಮತ್ತು ರಾಜ್ಯದ ಯಡಿಯೂರಪ್ಪ ಸರಕಾರದ ಸಾಧನೆ ಹಾಗೂ ಬಿಜೆಪಿ ಕಾರ್ಯಕರ್ತರ ಪರಿಶ್ರಮ ಅಭ್ಯರ್ಥಿಗಳ ಗೆಲುವಿಗೆ ಪೂರಕವಾಗಿದೆ. ರಾಜ್ಯದ ಗ್ರಾಮಾಂತರ ಪ್ರದೇಶದಲ್ಲಿ ಬಿಜೆಪಿ ಬಲಿಷ್ಠವಾಗಿ ಬೆಳೆದಿದೆ ಎನ್ನುವುದನ್ನು ಈ ಚುನಾವಣೆ ಮತ್ತೊಮ್ಮೆ ಸಾಬೀತುಪಡಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಕಾಂಗ್ರೆಸ್‌ ನಾಯಕರ ಅಹಂಕಾರದ ವರ್ತನೆಗೆ ಗ್ರಾಮೀಣ ಮತದಾರರು ಈ ಚುನಾವಣೆಯಲ್ಲಿ ಸೂಕ್ತ ಉತ್ತರ ನೀಡಿದ್ದಾರೆ ಎಂದು ತಿಳಿಸಿದ್ದಾರೆ.


ಬೆಳ್ತಂಗಡಿಯಲ್ಲಿ ಬಿಜೆಪಿ ಬೆಂಬಲಿತರ ಭರ್ಜರಿ ಬೇಟೆ, ಶಾಸಕ ಹರೀಶ್‌ ಪೂಂಜಾ ನೇತೃತ್ವದಲ್ಲಿ ವಿಜಯೋತ್ಸವ!
ದ.ಕ. ಜಿಲ್ಲೆಯ ಉಜಿರೆಯಲ್ಲಿ ರಾಷ್ಟ್ರ ವಿರೋಧಿ ಘೋಷಣೆ ಕೂಗಿದ ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿಗೆ ಸೂಚಿಸಲಾಗಿದೆ. ರಾಷ್ಟ್ರ ವಿರೋಧಿಗಳನ್ನು ಹತ್ತಿಕ್ಕಲು ಬಿಜೆಪಿ ಸರಕಾರ ಸಮರ್ಥವಾಗಿದೆ ಎಂದು ನಳಿನ್‌ಕುಮಾರ್‌ ಕಟೀಲ್‌ ತಿಳಿಸಿದ್ದಾರೆ.

- Advertisement -

Related news

error: Content is protected !!