Sunday, April 28, 2024
spot_imgspot_img
spot_imgspot_img

ಬಿಜೆಪಿಯ 5ನೇ ಪಟ್ಟಿ ಬಿಡುಗಡೆ : ಶೆಟ್ಟರ್‌ಗೆ ಬೆಳಗಾವಿ ಟಿಕೆಟ್‌,ಉತ್ತರ ಕನ್ನಡ ವಿಶ್ವೇಶ್ವರ ಹೆಗಡೆ ಕಾಗೇರಿ, ಚಿಕ್ಕಬಳ್ಳಾಪುರ ಮಾಜಿ ಸಚಿವ ಸುಧಾಕರ್‌

- Advertisement -G L Acharya panikkar
- Advertisement -

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕದ ನಾಲ್ಕು ಲೋಕಸಭಾ ಕ್ಷೇತ್ರಕ್ಕೆ 5ನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ.

ಬೆಳಗಾವಿ – ಜಗದೀಶ್ ಶೆಟ್ಟರ್
ಉತ್ತರ ಕನ್ನಡ – ವಿಶ್ವೇಶ್ವರ ಹೆಗಡೆ ಕಾಗೇರಿ
ಚಿಕ್ಕಬಳ್ಳಾಪುರ – ಡಾ.ಕೆ. ಸುಧಾಕರ್
ರಾಯಚೂರು – ರಾಜಾ ಅಮರೇಶ್ ನಾಯಕ್

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ‌ ಸಂಸದ ಅನಂತ ಕುಮಾರ್ ಹೆಗಡೆ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಮಿಸ್ ಆಗಿದೆ. ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಮಾಜಿ ಸಚಿವ ಕೆ. ಸುಧಾಕರ್ ಅವರು ಕೊನೆಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ದಿಸಲು ಬಿಜೆಪಿ ಹೈಕಮಾಂಡ್‌ನಿಂದ ಟಿಕೆಟ್ ಪಡೆಿದಿದ್ದಾರೆ. 4 ಲೋಕಸಭಾ ಕ್ಷೇತ್ರಗಳಲ್ಲಿ ಟಿಕೆಟ್ ಘೋಷಿಸುವುದರ ಮೂಲಕ ಬಿಜೆಪಿ ರಾಜ್ಯದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಮಾತ್ರ ಬಾಕಿ ಉಳಿಸಿಕೊಂಡಿದೆ. ಮಂಡ್ಯ, ಕೋಲಾರ, ಹಾಸನ ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲು ಮೈತ್ರಿ ಒಪ್ಪಂದ ಆಗಿದೆ.

- Advertisement -

Related news

error: Content is protected !!