Thursday, July 3, 2025
spot_imgspot_img
spot_imgspot_img

ಬ್ಲ್ಯಾಕ್ ಫಂಗಸ್ ಮತ್ತೆ 2 ಹೊಸ ಪ್ರಕರಣ

- Advertisement -
- Advertisement -

ಮಂಗಳೂರು: ಜಿಲ್ಲೆಯಲ್ಲಿ ಬುಧವಾರ ಮತ್ತೆ 2 ಕಪ್ಪು ಶಿಲೀಂಧ್ರ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಎರಡೂ ಪ್ರಕರಣಗಳು ಚಿಕ್ಕಮಗಳೂರು ಜಿಲ್ಲೆಗೆ ಸಂಬ0ಧಿಸಿದ್ದು, ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


ಬುಧವಾರ ಮೃತಪಟ್ಟ ಮೂವರಲ್ಲಿ ಇಬ್ಬರು ಚಿಕ್ಕಮಗಳೂರು ಮತ್ತು ಒಬ್ಬರು ಶಿವಮೊಗ್ಗ ಜಿಲ್ಲೆಯವರಾಗಿದ್ದು, ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಜಿಲ್ಲೆಯಲ್ಲಿ ಸದ್ಯ 53 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 11 ದಕ್ಷಿಣ ಕನ್ನಡ ಮತ್ತು 42 ಪ್ರಕರಣಗಳು ಬೇರೆ ಜಿಲ್ಲೆಗೆ ಸಂಬ0ಧಿಸಿದ್ದಾಗಿವೆ. ಜಿಲ್ಲೆಯಲ್ಲಿ ಈಗಾಗಲೆ ಹೊರ ಜಿಲ್ಲೆಯ ನಾಲ್ವರು ಕಪ್ಪು ಶಿಲೀಂಧ್ರ ಸೋಂಕಿನಿ0ದ ಗುಣಮುಖರಾಗಿದ್ದಾರೆ. ಈ ಲಕ್ಷಣ ಹೊಂದಿದ್ದ ಜಿಲ್ಲೆಯ ಇಬ್ಬರು ಮತ್ತು ಹೊರ ಜಿಲ್ಲೆಯ 8 ಮಂದಿ ಸೇರಿದಂತೆ ಒಟ್ಟು 10 ಮಂದಿ ಮೃತಪಟ್ಟಿದ್ದಾರೆ.

ಮೃತಪಟ್ಟಿರುವ ದಕ್ಷಿಣ ಕನ್ನಡ ಹಾಗೂ ಉಡುಪಿಯ ತಲಾ ಮೂವರಿಗೆ ಕೋವಿಡ್ ಇರುವುದು ದೃಢವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 594 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 637 ಮಂದಿ ಗುಣಮುಖರಾಗಿದ್ದಾರೆ.

- Advertisement -

Related news

error: Content is protected !!