Tuesday, May 14, 2024
spot_imgspot_img
spot_imgspot_img

ಪ್ರೇಮಿಗಳಿಗೆ ರೂಂ ಕೊಟ್ಟು ಖಾಸಗಿ ವಿಡಿಯೋ ಸೆರೆಹಿಡಿದು ಬ್ಲ್ಯಾಕ್​ ಮೇಲ್; ಮಂಗಳೂರು ಶೆಟ್ಟಿ ಲಂಚ್ ಹೋಂ ನ ಪಾರ್ಟ್‌‌ನರ್‍ಸ್ ಬಂಧನ..!!

- Advertisement -G L Acharya panikkar
- Advertisement -

ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್ ಮಾಡುತ್ತಿದ್ದವರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಬೆಂಗಳೂರಿನ ಕೆಂಗೇರಿ ಮುಖ್ಯರಸ್ತೆ ಕೆಂಚನಾಪುರದಲ್ಲಿರುವ ಹೋಟೆಲ್‌ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಪ್ರೇಮಿಗಳ ವಿಡಿಯೋ ಸೆರೆ ಹಿಡಿದು ಬಳಿಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮಂಗಳೂರು ಶೆಟ್ಟಿ ಲಂಚ್ ಹೋಮ್ ಪಾರ್ಟ್​ನರ್ ನಯನಾ ಹಾಗೂ ಪಾರ್ಟ್​ನರ್ ಕಿರಣ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಶೆಟ್ಟಿ ಲಂಚ್ ಹೋಮ್ ಹೋಟೆಲ್ ನಲ್ಲಿ ಪ್ರೇಮಿಗಳಿಗೆ ರೂಮ್​ ನೀಡಲಾಗಿತ್ತು. ಬಳಿಕ ರೂಮ್​ನಲ್ಲಿ ರಹಸ್ಯವಾಗಿ‌ ಕ್ಯಾಮೆರಾ ಅಡಗಿಸಿ ಇಟ್ಟು ಪ್ರೇಮಿಗಳ ಖಾಸಗಿ ಕ್ಷಣವನ್ನು ಸೆರೆ ಹಿಡಿದು ಯುವತಿಗೆ ಬ್ಲ್ಯಾಕ್​ ಮೇಲ್ ಮಾಡಿ ಹಣಕ್ಕೆ ಪೀಡಿಸುತ್ತಿದ್ದರು. ಒಂದು ಲಕ್ಷ ಹಣಕ್ಕೆ ನೀಡಬೇಕು. ಹಣ ಕೊಡದಿದ್ದಾರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡ್ತೀನಿ. ನಿಮ್ಮ ಸಂಬಂಧಿಕರು ಹಾಗೂ ಸ್ನೇಹಿತರಿಗೆ ಕಳುಹಿಸುತ್ತೇನೆ ಎಂದು ಕಿರಣ್ ಬೆದರಿಕೆ ಹಾಕಿದ್ದ.

ನಯನಾ ಹಾಗೂ ಕಿರಣ್ ಜೊತೆಯಾಗಿ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿ ಶೆಟ್ಟಿ ಲಂಚ್ ಹೋಮ್ ಹೋಟೆಲ್ ಆರಂಭಿಸಿದ್ದರು. ಅದೇ ಹೋಟೆಲ್​ಗೆ ನಯನಾ ಸಂಬಂಧಿ ಯುವತಿ(ಬ್ಲ್ಯಾಕ್​ ಮೇಲ್​ ಪ್ರಕರಣದ ಸಂತ್ರಸ್ಥೆ) ಆಗಾಗ ತನ್ನ ಪ್ರಿಯಕರ ಜೊತೆ ಬರುತ್ತಿದ್ದಳು. ಈ ವೇಳೆ ಹೋಟೆಲ್ ರೂಮ್ ನಲ್ಲಿ ಇರುವಂತೆ ಹೇಳಿದ್ದ ನಯನಾ, ಬಳಿಕ ಇಬ್ಬರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಳು. ನಂತರ ಅವರೇ ರೂಮ್ ಕೊಟ್ಟು ಅವರೆ ಬೀಸಿದ್ದು, ಅಶ್ಲೀಲವಾಗಿ ಎಡಿಟ್ ಮಾಡಿ‌ ಯುವತಿಗೆ ಆರೋಪಿ ಕಿರಣ್, ವಾಟ್ಸಪ್​ ಮಾಡಿ ಒಂದು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಹಣ ಕೊಡದಿದ್ದರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾಕೋದಾಗಿ ಬೆದರಿಸುತ್ತಿದ್ದ. ಇದರಿಂದ ಯುವತಿ ಹೆದರಿಕೊಂಡು ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಇದೀಗ ಈ ದೂರಿನ ಆಧಾರ ಮೇಲೆ ಪೊಲೀಸರು ನಯನಾ ಹಾಗೂ ಕಿರಣ್​ನನ್ನು ಬಂಧಿಸಿದ್ದಾರೆ. ಅಲ್ಲದೇ ಮೊಬೈಲ್ ವಶಕ್ಕೆ ಪಡೆದು ಯುವತಿಯ ವಿಡಿಯೋ ಡಿಲೀಟ್ ಮಾಡಿದ್ದಾರೆ.

- Advertisement -

Related news

error: Content is protected !!