Tuesday, July 1, 2025
spot_imgspot_img
spot_imgspot_img

ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಜಂಟಿ ಆಶ್ರಯದಲ್ಲಿ ಕನಕಮಜಲು ಮತ್ತು ಪೈಚಾರಿನಲ್ಲಿ ಸಾರ್ವಜನಿಕ ರಕ್ತದಾನ ಶಿಬಿರ

- Advertisement -
- Advertisement -

ಸುಳ್ಯ: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಜಂಟಿ ಆಶ್ರಯದಲ್ಲಿ ಸುಳ್ಯ ತಾಲೂಕಿನ ಕನಕಮಜಲು ಮತ್ತು ಪೈಚಾರಿನಲ್ಲಿ ನಡೆಯುವ ಸಾರ್ವಜನಿಕ ರಕ್ತದಾನ ಶಿಬಿರ ಯಶಸ್ವಿಗೊಳಿಸಲು ಕರೆ.

ಅಲ್ ಅಮೀನ್ ಯೂತ್ ಸೆಂಟರ್ ಪೈಚಾರ್ ಹಾಗು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಇದರ ಸಹಕಾರದೊಂದಿಗೆ ಪೈಚಾರಿನಲ್ಲಿ ಮತ್ತು ಬ್ರದರ್ಸ್ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಕಂಚಿಲ್ಪಾಡಿ ಹಾಗು ಸಕ್ಸಸ್ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಸುಣ್ಣಾಮೂಲೆ ಇದರ ವತಿಯಿಂದ “ಕಂಚಿಲ್ಪಾಡಿ ಪ್ರೀಮಿಯರ್ ಲೀಗ್ ಸೀಸನ್ 6 ಪ್ರಯುಕ್ತ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.) ಸಂಸ್ಥೆ ಯ ಸಹಯೋಗದೊಂದಿಗೆ ಕನಕಮಜಲಿನಲ್ಲಿ 17-01-2021 ರ ಆದಿತ್ಯವಾರ ಬ್ರಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯ ನಡೆಯಲಿದೆ.

ಜಿಲ್ಲೆಯ ಎಲ್ಲಾ ಬ್ಲಡ್ ಬ್ಯಾಂಕ್ ಗಳಲ್ಲೂ ರಕ್ತದ ತೀವ್ರ ಕೊರತೆ ಕಾಣುತ್ತಿದ್ದು ಈ ಕೊರತೆಯನ್ನು ನೀಗಿಸುವ ಸಲುವಾಗಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಸಂಸ್ಥೆ ಯು ಹಲವು ಸಂಘ ಸಂಸ್ಥೆ ಗಳ ಸಹಯೋಗದೊಂದಿಗೆ ಜಿಲ್ಲೆಯ ಹಲವು ಕಡೆಗಳಲ್ಲಿ ತುರ್ತು ರಕ್ತದಾನ ಶಿಬಿರ ಆಯೋಜಿಸುತ್ತಿದೆ.ಇದರ ಅಂಗವಾಗಿ ನಡೆಯುವ ಈ ರಕ್ತದಾನ ಶಿಬಿರದಲ್ಲಿ ಹೆಚ್ಚಿನ ಸಾರ್ವಜನಿಕರು ಬಂದು ರಕ್ತದಾನ ಮಾಡಿ ಜೀವ ಉಳಿಸಬೇಕಾಗಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

Related news

error: Content is protected !!