- Advertisement -
- Advertisement -
ಬೆಂಗಳೂರು: ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್ ಅವರು ನೀಲಿ ಚಿತ್ರ ವೀಕ್ಷಣೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಕನ್ನಡದ ಖಾಸಗಿ ಸುದ್ದಿವಾಹಿನಿ ವರದಿ ಮಾಡಿದೆ.
ಪ್ರಕಾಶ್ ರಾಥೋಡ್ ಅವರು ಇಂದು ವಿಧಾನ ಪರಿಷತ್ನಲ್ಲಿ ತಮ್ಮ ಮೊಬೈಲ್ ಅನ್ನು ತೆಗೆದುಕೊಂಡು ಗ್ಯಾಲರಿಗಳನ್ನು ನೋಡುತ್ತಿದ್ದ ವೇಳೆಯಲ್ಲಿ ಆಶ್ಲೀಲವಾದ ಫೋಟೋಗಳನ್ನು ನೋಡುತ್ತಿದ್ದರು ಅಂತ ಸುದ್ದಿವಾಹಿನಿ ವರದಿ ಮಾಡಿದೆ.
ಇಂದು ವಿಧಾನಪರಿಷತ್ ಕಲಾಪ ನಡೆಯುತ್ತಿತ್ತು. ಕಾಂಗ್ರೆಸ್ ಎಂಎಲ್ಸಿ ಪ್ರಕಾಶ್ ರಾಥೋಡ್ ಅವರು ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿದ್ದ ದೃಶ್ಯ ಮಾಧ್ಯಮಗಳ ಕ್ಯಾಮರಾದಲ್ಲಿ ಸೆರೆಯಾಗಿದೆ. ಇಡೀ ರಾಜ್ಯವನ್ನು ಪ್ರತಿನಿಧಿಸುವ ಶಾಸಕರುಗಳು ಕೂರುವ ಪ್ರಜಾ ದೇಗುಲದಲ್ಲಿ ಇಂತಹ ಅಸಹ್ಯ ವರ್ತನೆ ತೋರಿದ ಎಂಎಲ್ಸಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ನೈತಿಕತೆಯ ಪ್ರಶ್ನೆಗೆ ಸ್ವತಃ ಆ ಎಂಎಲ್ಸಿ ಜತೆಗೆ ಕಾಂಗ್ರೆಸ್ ಪಕ್ಷದ ಮುಖಂಡರು ಸ್ಪಷ್ಟನೆ ನೀಡಬೇಕು ಎಂಬ ಆಗ್ರಹ ಕೇಳಿಬಂದಿದೆ.
- Advertisement -