Sunday, July 26, 2026
spot_imgspot_img
spot_imgspot_img

ಪ್ರೇಯಸಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ..! ತಲೆಮರೆಸಿಕೊಂಡ ಪ್ರಿಯಕರ

- Advertisement -
- Advertisement -

ಪ್ರೇಯಸಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿ ಪರಾರಿಯಾದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಜೀವನ್‌ಭೀಮಾ ನಗರದ ಕೋಡಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹೈದರಾಬಾದ್‌ ಮೂಲದ ಆಕಾಂಕ್ಷಾ ಮೃತ ಯುವತಿಯಾಗಿದ್ದು, ಈಕೆಯನ್ನು ದೆಹಲಿ ಮೂಲದ ಅರ್ಪಿತ್ ಕೊಲೆ ಮಾಡಿ ತಲೆಮರೆಸಿಕೊಂಡಿದ್ದಾನೆ.

ಯುವತಿ ಬಿಕಾಂ ವ್ಯಾಸಂಗ ಮಾಡಿ ಖಾಸಗಿ ಕಂಪನಿಯೊಂದರಲ್ಲಿ ಸೇಲ್ಸ್‌ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದು, ಆಕಾಂಕ್ಷಾ ಹಾಗೂ ಅರ್ಪಿತ್ ಇಬ್ಬರೂ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ನಂತರ ಕೆಲಸ ಬದಲಾವಣೆ ಮಾಡಿ ಬೇರೆ ಬೇರೆ ಕಡೆ ಕೆಲಸ ಮಾಡುತ್ತಿದ್ದರು. ಇಬ್ಬರು ಒಟ್ಟಿಗೆ ವಾಸ ಮಾಡುತ್ತಿದ್ದರು.

ಇತ್ತೀಚೆಗೆ ಇವರಿಬ್ಬರ ಮಧ್ಯೆ ಜಗಳ ನಡೆದಿದೆ. ಈ ವೇಳೆ ಇಬ್ಬರು ಬೇರೆಯಾಗಬೇಕು ಎಂದು ಮಾತಾಡಿಕೊಂಡಿದ್ದರು. ಇದಾದ ಬಳಿಕ ಸೋಮವಾರ ಇಬ್ಬರು ಮನೆಯಲ್ಲಿ ಇರುವಾಗ ಗಲಾಟೆ ಶುರುವಾಗಿದೆ. ಬಳಿಕ ಯುವತಿಯನ್ನು ಅರ್ಪಿತ್ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಕೊಂದ ಬಳಿಕ ಯುವತಿಯ ಕುತ್ತಿಗೆಗೆ ಬಟ್ಟೆ ಕಟ್ಟಿ ನೇಣು ಹಾಕಿಕೊಂಡು ಸಾವನಪ್ಪಿರುವ ರೀತಿ ಬಿಂಬಿಸುವ ಯತ್ನ ಮಾಡಿದ್ದಾನೆ. ಆದರೆ ಮೃತ ದೇಹವನ್ನು ಫ್ಯಾನ್‍ಗೆ ಕಟ್ಟಲಾಗದೆ ನೆಲದ ಮೇಲೆ ಬಿಟ್ಟು ಮನೆ ಬೀಗ ಹಾಕಿಕೊಂಡು ಎಸ್ಕೇಪ್ ಆಗಿದ್ದಾನೆ. ರಾತ್ರಿ ಮತ್ತೋರ್ವ ರೂಮ್‌ಮೇಟ್‌ ಕೆಲಸ ಮುಗಿಸಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮೊದಲು ಅನುಮಾನಾಸ್ಪದ ಸಾವು ಎಂದುಕೊಂಡಿದ್ದ ಪೊಲೀಸರಿಗೆ ಸ್ಥಳ ಪರಿಶೀಲನೆ ಬಳಿಕ ಕೊಲೆ ಎಂಬುದು ಬೆಳಕಿಗೆ ಬಂದಿದೆ.

ಜೀವನ್‌ಭೀಮಾ ನಗರ ಪೊಲೀಸರು ಆರೋಪಿ ವಿರುದ್ಧ ಕೊಲೆ ಕೇಸ್‌ ದಾಖಲು ಮಾಡಿದ್ದಾರೆ. ತಲೆಮರೆಸಿ ಕೊಂಡಿರುವ ಅರ್ಪಿತ್‍ಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ.

- Advertisement -

Related news

error: Content is protected !!