Friday, June 19, 2026
spot_imgspot_img
spot_imgspot_img

ಬೈಕ್‌ಗೆ ಬಿಎಂಟಿಸಿ ಬಸ್ ಢಿಕ್ಕಿ; ಮೂರು ವರ್ಷದ ಮಗು ಮೃತ್ಯು

- Advertisement -
- Advertisement -

ಬೈಕ್‌ಗೆ ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್‌ನಲ್ಲಿ ನಡೆದಿದೆ.

ಅಯಾನ್ (3) ಮೃತಪಟ್ಟ ಮಗು. ಬೆಂಗಳೂರಿನ ಗಾರೇಪಾಳ್ಯ ಜಂಕ್ಷನಲ್ಲಿ ಭಾನುವಾರ ಸಂಜೆ ಘಟನೆ ನಡೆದಿದೆ. ಮಗು ದೊಡ್ಡಮ್ಮನ ಜೊತೆ ವಾಸವಾಗಿತ್ತು. ಭಾನುವಾರ ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದ ಸಂದರ್ಭ ಹಿಂಬಂದಿಯಿಂದ ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಮಗು ಕೆಳಗಡೆ ಬಿದ್ದಿದೆ.

ಮಗು ಕೆಳಗಡೆ ಬೀಳುತ್ತಿದ್ದಂತೆ ಬಿಎಂಟಿಸ್ ಬಸ್ಸಿನ ಚಕ್ರ ಮಗುವಿನ ಮೇಲೆ ಹರಿದಿದೆ. ಘಟನೆಯಿಂದ ಮೂರು ವರ್ಷದ ಗಂಡು ಮಗು ಸ್ಥಳದಲ್ಲೇ ಮೃತ ಪಟ್ಟಿದೆ. ಈ ಸಂಬಂಧ ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ಬಿಎಂಟಿಸಿ ಬಸ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!