Tuesday, June 16, 2026
spot_imgspot_img
spot_imgspot_img

ಯುವತಿ ಮೇಲೆ ಬಸ್​ ಹತ್ತಿಸಲು ಯತ್ನಿಸಿದ ಬಿಎಂಟಿಸಿ ಬಸ್​ ಚಾಲಕ- ಕೆಲಸದಿಂದ ಅಮಾನತು

- Advertisement -
- Advertisement -

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚಾಲಕ ಯುವತಿ ಮೇಲೆ ಬಸ್​ ಹತ್ತಿಸಲು ಯತ್ನಿಸಿರುವ ಘಟನೆ ಕಸ್ತೂರ್ಬಾ ರಸ್ತೆಯ ಕ್ಷೀನ್ಸ್​ ಜಂಕ್ಷನ್​ (ಎಂ.ಜಿ.ರಸ್ತೆ) ಬಳಿ ನಡೆದಿದೆ.ಮೇ 23ರ ಸಂಜೆ 5.40ಕ್ಕೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಿಎಂಟಿಸಿ ಬಸ್​ ಚಾಲಕ ಮತ್ತು ಯುವತಿ ನಡುವೆ ಗಲಾಟೆಯಾಗಿದೆ. ಈ ಹಿನ್ನೆಲೆಯಲ್ಲಿ ಕ್ಷೀನ್ಸ್​ ಜಂಕ್ಷನ್​ನಲ್ಲಿ ಕಾರಿನಿಂದ ಇಳಿದ ಯುವತಿ ಬಿಎಂಟಿಸಿ ಬಸ್ ಚಾಲಕನನ್ನು ಪ್ರಶ್ನೆ ಮಾಡುತ್ತಿದ್ದರು. ಚಾಲಕ ಯುವತಿಯ ಮೇಲೆ​ ಬಸ್​ ನುಗ್ಗಿಸಿದ್ದಾರೆ.

ಯುವತಿ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದಾರೆ. ಸ್ವಲ್ಪ ಯಾಮಾರಿದ್ದರು ಯುವತಿಯ ಜೀವಕ್ಕೆ ಕುತ್ತು ಬರುತ್ತಿತ್ತು. ಚಾಲಕನ ಕೃತ್ಯ ಕಂಡು ಜನರು ಬೆಚ್ಚಿಬಿದ್ದಿದ್ದರು. ಇನ್ನು, ಯುವತಿಯ ಮೇಲೆ ಬಸ್​ ಹತ್ತಿಸಲು ಯತ್ನಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.ಯುವತಿ ಮೇಲೆ ಬಿಎಂಟಿಸಿ ಬಸ್ ಹತ್ತಿಸಲು ಮುಂದಾಗಿದ್ದ ಚಾಲಕ ಪ್ರಶಾಂತ್ ಅವರನ್ನು ಅಮಾನತುಗೊಳಿಸಲಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ಮೇರೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

- Advertisement -

Related news

error: Content is protected !!