Wednesday, August 26, 2026
spot_imgspot_img
spot_imgspot_img

ದೋಣಿ ಮುಳುಗಡೆ – 20 ಮಂದಿಯ ರಕ್ಷಣೆ, ಶೋಧಕಾರ್ಯ ಮುಂದುವರಿಕೆ

- Advertisement -
- Advertisement -

ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮಗುಚಿ ಬಿದ್ದ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಸಂಭವಿಸಿದೆ.

30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮಗುಚಿ ಬಿದ್ದ ಘಟನೆಯಿಂದ ಸ್ಥಳದಲ್ಲಿ ಆತಂಕ ಉಂಟಾಗಿದ್ದು, ಸ್ಥಳೀಯರು ಹಾಗೂ ರಕ್ಷಣಾ ತಂಡದಿಂದ ಮಕ್ಕಳ ಶೋಧ ಕಾರ್ಯಾ ನಡೆಯುತ್ತಿದೆ. ಇನ್ನು ರಕ್ಷಣಾ ತಂಡದಿಂದ 20 ಮಕ್ಕಳನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧ ಮುಂದುವರಿದಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡವು ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆ ನಡೆಸುತ್ತಿದೆ. ಮಕ್ಕಳ ಕುಟುಂಬಗಳಿಗೆ ನೆರವು ಮತ್ತು ಬೆಂಬಲ ನೀಡಲಾಗುವುದು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ.

- Advertisement -

Related news

error: Content is protected !!