Friday, July 17, 2026
spot_imgspot_img
spot_imgspot_img

ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ – ಮೀನುಗಾರರ ರಕ್ಷಣೆ

- Advertisement -
- Advertisement -

ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿಯಾದ ಪರಿಣಾಮ ದೋಣಿಯಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ.

ದೋಣಿ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟಿತ್ತು. ದೋಣಿಯಲ್ಲಿ ಆಂಧ್ರಪ್ರದೇಶ ಮೂಲದ 6 ಮಂದಿ ಮೀನುಗಾರರಿದ್ದರು. ಮೀನುಗಾರಿಕೆ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ದೋಣಿ ಪಲ್ಟಿಯಾಗಿದೆ.

ದೋಣಿ ಪಲ್ಟಿಯಾದ ರಭಸಕ್ಕೆ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದಾರೆ. ಈ ವೇಳೆ ಸ್ಥಳೀಯ ಮೀನುಗಾರರು ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!