- Advertisement -
- Advertisement -
ವಿಟ್ಲ: ಮಂಗಳೂರಿನಲ್ಲಿ ವಿಟ್ಲದ ಮಹಿಳೆಗೆ ಕೊರೊನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ವಿಟ್ಲದ ಬೊಬ್ಬೆಕೇರಿಯಲ್ಲಿರುವ ಮಹಿಳೆಯ ಪತಿಯ ಮನೆ ಸೀಲ್ ಡೌನ್. ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಗಾ ವಹಿಸಲಾಗಿದೆ.
ವಿಟ್ಲದ ಬೊಬ್ಬೇಕೆರಿ ನಿವಾಸಿ, ಮಹಿಳೆ ಕೆಲವು ಸಮಯಗಳ ಹಿಂದೆ ದೇರಳಕಟ್ಟೆಯಲ್ಲಿರುವ ತನ್ನ ಮನೆಗೆ ತೆರಳಿದ್ದರು. ಬಳಿಕ ಹೆರಿಗೆಗೆಂದು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಕೋವಿಡ್ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಪತ್ತೆಯಾಗಿತ್ತು. ವಿಟ್ಲದ ಬೊಬ್ಬೆಕೇರಿಯಲ್ಲಿರುವ ಆಕೆಯ ಪತಿಯ ಮನೆ ಸೀಲ್ ಡೌನ್ ಹಾಗೂ 200 ಮೀಟರ್ ವ್ಯಾಪ್ತಿಯಲ್ಲಿರುವ 38 ಅಂಗಡಿಗಳನ್ನುನಿಗಾ ವಹಿಸಲಾಗಿದೆ. ವಿಟ್ಲ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾಲಿನಿ, ಕಂದಾಯ ನಿರೀಕ್ಷಕ ಪಕೀರ ಮೂಲ್ಯ, ಗ್ರಾಮ ಕರಣಿಕ ಪ್ರಕಾಶ್, ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ಮನೆ ಸೀಲ್ ಡೌನ್ ಮಾಡಲಾಯಿತು. ಸದ್ಯ ತಾಯಿ ಹಾಗೂ ಮಗು ಆರೋಗ್ಯದಲ್ಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
- Advertisement -